ಖಾಸಗಿ ಶಾಲೆಗಳ ಆನ್‌ಲೈನ್‌ನಲ್ಲಿ ಟಿಸಿ ನೀಡುವ ಪ್ರಕ್ರಿಯೆಗೆ ಖಂಡನೆ

ಮಕ್ಕಳ ವರ್ಗಾವಣೆ ಪತ್ರ (ಟಿಸಿ) ನೀಡುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ನಡುವಿನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಬಸವರಾಜ ಪೂಜಾರಿ, ಮಲ್ಲಿಕಾರ್ಜುನ ತುಪ್ಪದ ಮತ್ತಿತರರಿದ್ದಾರೆ.
ಮಕ್ಕಳ ವರ್ಗಾವಣೆ ಪತ್ರ (ಟಿಸಿ) ನೀಡುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ನಡುವಿನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ವಿಜಯಪುರದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಬಸವರಾಜ ಪೂಜಾರಿ, ಮಲ್ಲಿಕಾರ್ಜುನ ತುಪ್ಪದ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ಆಕ್ರೋಶ
  • ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮಗೆ ಮನವಿ
ವಿಜಯಪುರ : ಮಕ್ಕಳ ವರ್ಗಾವಣೆ ಪತ್ರ (ಟಿಸಿ) ನೀಡುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ನಡುವಿನ ತಾರತಮ್ಯ ಸರಿಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಅವರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ಮಾತನಾಡಿ, ಪ್ರತಿ ಶೈಕ್ಷಣಿಕ ವರ್ಷದಲ್ಲಿ ಮಕ್ಕಳು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ಮತ್ತು ಸರ್ಕಾರಿ ಶಾಲೆಗೆ ಪ್ರವೇಶ ಪಡೆಯುವುದು ಸಾಮಾನ್ಯ ಪ್ರಕ್ರಿಯೆ. ಆದರೆ, ಸದ್ಯ ಸರ್ಕಾರ ಆನ್‌ಲೈನ್‌ನಲ್ಲಿ ಟಿಸಿ ನೀಡುವ ಪ್ರಕ್ರಿಯೆ ಪ್ರಾರಂಭಿಸಿದ್ದು, ಅದರಲ್ಲಿ ಕೇವಲ ಖಾಸಗಿ ಶಾಲೆಯವರು ಟಿಸಿ ನೀಡಲು ಅವಕಾಶ ಮಾಡಿ ಸರ್ಕಾರಿ ಶಾಲೆಯ ಮಕ್ಕಳ ವರ್ಗಾವಣೆ ಪತ್ರ ನೀಡಲು ಅವಕಾಶ ನೀಡಿಲ್ಲ ಎಂದರು.
ಸದರಿ ಅವೈಜ್ಞಾನಿಕ ನೀತಿಯಿಂದಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ತೆಗೆಸಲು ಹೋದಾಗ ಮಗುವಿನ ಹೆಸರು ಆನ್‌ಲೈನ್‌ನಲ್ಲಿ ಸರ್ಕಾರಿ ಶಾಲೆ ತೋರಿಸುತ್ತದೆ. ಆಗ ಆ ಮಗುವಿಗೆ ಬಸ ಪಾಸ್ ಸಿಗುತ್ತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಮತ್ತೆ ಸರ್ಕಾರಿ ಶಾಲೆಗೆ ಹೋಗಬೇಕು. ಹೀಗಾಗಿ, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಕೆಲವು ಸರ್ಕಾರಿ ಶಾಲೆಯ ಮಕ್ಕಳು ಖಾಸಗಿ ಶಾಲೆಗೆ ದಾಖಲಾಗಿದ್ದಾರೆ. ಆ ಮಕ್ಕಳು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಪ್ರವೇಶ ಪಡೆಯಬೇಕಾದರೆ ಮತ್ತೆ ಅದೇ ಸಮಸ್ಯೆ ಎದುರಿಸುವಂತಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಕೂಡಲೇ ಸಮಸ್ಯೆ ಸರಿಪಡಿಸದೇ ಇದ್ದಲ್ಲಿ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಂದ ಸರ್ಕಾರಿ ಶಾಲೆಗಳಿಗೆ ಪ್ರವೇಶ ಪಡೆದ ಮಕ್ಕಳ ವರ್ಗಾವಣೆ ಪತ್ರ ನೀಡುವುದನ್ನು ಅನಿವಾರ್ಯವಾಗಿ ನಿಲ್ಲಿಸಬೇಕಾಗುತ್ತದೆ. ಆಗ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ ತುಪ್ಪದ, ಪದಾಧಿಕಾರಿಗಳಾದ ಪ್ರಾಣೇಶ ಜೋಶಿ, ಶ್ರೀಶೈಲ ಪಾರಗೋಡ, ಮಲ್ಲಿಕಾರ್ಜುನ ಆಸಂಗಿ, ಲಕ್ಷ್ಮಿಕಾಂತ ಮಾನೆ, ನಾನಾಗೌಡ ಪಾಟೀಲ, ಮಹಾಂತೇಶ ಜಾಲವಾದಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net