ಹೈಕ ಹೋರಾಟಗಾರರ ಸಮಾವೇಶ

ರಾಘವೇಂದ್ರ ಕುಷ್ಟಗಿ, ಸಂಸ್ಥಾಪಕ ಅಧ್ಯಕ್ಷ, ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ
ರಾಘವೇಂದ್ರ ಕುಷ್ಟಗಿ, ಸಂಸ್ಥಾಪಕ ಅಧ್ಯಕ್ಷ, ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರ
Published on
ರಾಯಚೂರು: ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ ಸಮರ್ಪಕವಾಗಿ ಜಾರಿಗಾಗಿ ಒತ್ತಾಯಿಸಿ ಮೇ 24ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಠಾರಿ ಫಂಕ್ಷನ್ ಹಾಲ್‌ನಲ್ಲಿ ದುಂಡು ಮೇಜಿನ ಸಭೆ, 371 (ಜೆ) ಹೋರಾಟಗಾರರ ಸಮಾವೇಶ ಹಾಗೂ ಕಲ್ಯಾಣ ಕರ್ನಾಟಕ ವಿಕಾಸ ವೇದಿಕೆ ಸ್ಥಾಪನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಂದ ತಲಾ 25 ಹೋರಾಟಗಾರರು ಭಾಗವಹಿಸಲಿದ್ದಾರೆ. ಈ ಭಾಗದ ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. 
ಕೆಕೆಆರ್‌ಡಿಬಿ ಅನುದಾನವನ್ನು ವಿಮಾನ ನಿಲ್ದಾಣ, ಬಸ್ ಖರೀದಿ ಸೇರಿ ಇತರ ಕಾಮಗಾರಿಗಳಿಗೆ ಬಳಸಲಾಗುತ್ತಿದೆಯೇ ಹೊರತು, ಶಿಕ್ಷಣ, ಆರೋಗ್ಯ ಮತ್ತು ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತಿಲ್ಲ.
ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೋರಾಟಗಾರರು, ಸಾರ್ವಜನಿಕರು, ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. 
ಪ್ರಮುಖರಾದ ಚಾಮರಸ ಮಾಲಿಪಾಟೀಲ್, ಹರವಿ ನಾಗನಗೌಡ, ವೀರಣ್ಣ ಭಂಡಾರಿ, ಜಾನ್‌ವೆಸ್ಸಿ, ಬಿ.ಬಸವರಾಜ, ಬೂದೆಪ್ಪ, ಆರ್.ಬಸವರಾಜ, ಚಂದ್ರಶೇಖರ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net