ರಾಜ್ಯದ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯಗಳ ಬಲವರ್ಧನೆ ಹಾಗೂ ಜನಪರ ಆಡಳಿತಕ್ಕೆ ನೀಡುತ್ತಿರುವ ನಾಯಕತ್ವ ಗೌರವಿಸುವ ಉದ್ದೇಶದಿಂದ ಸಿಎಂ ಡಿಕೆಶಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ. ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್, ಎಸ್ಕಾಂಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು, ಹಿರಿಯ ಅಧಿಕಾರಿಗಳು ಮತ್ತು ವಿವಿಧ ನೌಕರರ ಸಂಘಗಳ ಪದಾಧಿಕಾರಿಗಳು ಸೇರಿ ಸಾವಿರಾರು ವಿದ್ಯುತ್ ನೌಕರರು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು.