ಬಾಗೇಪಲ್ಲಿಯಲ್ಲಿ ಕಾಂಗ್ರೆಸ್​ ಸಂಭ್ರಮಾಚರಣೆ

Congress celebration in Bagepalli
Congress celebration in Bagepalli
Published on
ಬಾಗೇಪಲ್ಲಿ: ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆಯಾೆೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮುಖಂಡರು, ಕಾರ್ಯಕರ್ತರು ಪಟ್ಟಣದ ಮುಖ್ಯರಸ್ತೆಯಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕ ಎಸ್​.ಎನ್​.ಸುಬ್ಬಾರೆಡ್ಡಿಗೆ ಕಾನೂನು ಹೋರಾಟದಲ್ಲಿ ಅಭೂತಪೂರ್ವ ಜಯಸಿಕ್ಕಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲ್ಮನರಸಿಂಹಪ್ಪ ಸಂತಸ ವ್ಯಕ್ತಪಡಿಸಿದರು.
ಶಾಂತಿಯುತವಾಗಿರುವ ಬಾಗೇಪಲ್ಲಿ ವಿಧಾನಸಭಾ ೇತ್ರದಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಹೈಕೋರ್ಟ್​ನಲ್ಲಿ ಸಲ್ಲಿಸಿರುವ ಚುನಾವಣಾ ಅಕ್ರಮ ತಕರಾರು ಅರ್ಜಿ ವಿಚಾರಣೆ ನಡೆಸಿ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನ ಅಸಿಂಧುಗೊಳಿಸಲಾಗಿತ್ತು, ಆದರೆ, ಹೈ ಕೋರ್ಟ್​ನ ಆದೇಶ ಪ್ರಶ್ನಿಸಿ ಶಾಸಕರು ಸುಪ್ರೀಂಕೋರ್ಟ್​ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಪೀಠ ಹೈಕೋರ್ಟ್​ ಆದೇಶಕ್ಕೆ ತಡೆಯಾೆ ಆದೇಶ ನೀಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಶಾಸಕರ ಪರವಾಗಿ ತೀರ್ಪು ನೀಡುವ ವಿಶ್ವಾಸ ಇದ್ದು, ಅವರು ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾಗಲಿದೆ ಎಂದರು.
ದಲಿತ ಮುಖಂಡ ಬಿ.ವಿ.ವೆಂಕಟರವಣ ಮಾತನಾಡಿ, ಬಾಗೇಪಲ್ಲಿ ವಿಧಾನಸಭಾ ೇತ್ರದಲ್ಲಿ ಕಳೆದ 20 ವರ್ಷಗಳಿಂದ ಜನ ಸೇವೆ ಮಾಡಿಕೊಂಡು ಬಂದಿರುವ ಸುಬ್ಬಾರೆಡ್ಡಿ ಅವರಿಗೆ ಸಿಕ್ಕಿರುವ ಜಯವಾಗಿದೆ ಎಂದರು.
ಯೂತ್​ ಕಾಂಗ್ರೆಸ್​ ಸೋಮಶೇಖರ್​, ರಾಮನಾಥ್​, ನರೇಂಧ್ರ, ಗುಟ್ಟಪಾಳ್ಯಂ ಶ್ರೀನಿವಾಸ್​, ನಿಜಾಮುದ್ದೀನ್​, ರಾಮನುಪಡಿ ಬಾಬು ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net