ಜಿಬಿಎ (GBA) ವ್ಯಾಪ್ತಿಯ 27 ವಾರ್ಡ್ಗಳಲ್ಲಿ ನಿಯಮಬಾಹಿರವಾಗಿ ಎರಡೆರಡು ಎಸ್ಐಆರ್ ನಡೆಸಲಾಗುತ್ತಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೃಪ್ತಿಪಡಿಸುವುದಕ್ಕಾಗಿಯೇ ಸರ್ಕಾರ ಈ ರೀತಿಯ ಅಕ್ರಮ ಕೆಲಸಗಳಿಗೆ ಕೈಹಾಕಿದೆ. ಒಂದೆಡೆ ರಾಜ್ಯ ಚುನಾವಣಾ ಆಯೋಗ ಮತ್ತೊಂದು ಎಸ್ಐಆರ್ ನಡೆಸುತ್ತಿದ್ದರೆ, ಇನ್ನೊಂದೆಡೆ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮ ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಅನರ್ಹರು ಇರಬಾರದು ಎಂಬ ಉದ್ದೇಶದಿಂದಲೇ ಈ ಎಸ್ಐಆರ್ ಮಾಡಲಾಗುತ್ತಿದೆ. ಆದರೆ ವಾಸ್ತವದಲ್ಲಿ ರಾಜ್ಯದ ಅಕ್ರಮ ಮತದಾರರ ಪಟ್ಟಿ ಸಿದ್ಧಪಡಿಸಲು ಸರ್ಕಾರವೇ ನೇರ ಹಾದಿ ಮಾಡಿಕೊಟ್ಟಿದೆ ಎಂದು ಶೋಭಾ ಕರಂದ್ಲಾಜೆ ಆಕ್ರೋಶ ಹೊರಹಾಕಿದ್ದಾರೆ.