ನವದೆಹಲಿ: ಕರ್ನಾಟಕದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸುವ ಮುನ್ನವೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ(Siddaramaiah) ಮಹತ್ವದ ಹುದ್ದೆ ನೀಡಿರುವ ಕಾಂಗ್ರೆಸ್, ಪಕ್ಷದ ಅತ್ಯುನ್ನತ ಹಾಗೂ ಪ್ರಮುಖ ನಿರ್ಧಾರ ಕೈಗೊಳ್ಳುವ ಸಮಿತಿ ಎಂದೇ ಪರಿಗಣಿಸಲ್ಪಟ್ಟಿರುವ ಸಿಡಬ್ಲ್ಯೂಸಿ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.