ಕಾಂಗ್ರೆಸ್ ಮುಸ್ಲಿಂ ಲೀಗ್ ಇದ್ದಂತೆ

ಬಾದಾಮಿ ತಾಲೂಕಿನ ಮಹಾಕೂಟದಲ್ಲಿ ಭಾನುವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪಂ.ದೀನದಯಾಳ್ ಉಪಾಧ್ಯಾಯ ಮಹಾಭಿಯಾನದ ಪ್ರಶಿಕ್ಷಣ ವರ್ಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟಿಸಿದರು.
ಬಾದಾಮಿ ತಾಲೂಕಿನ ಮಹಾಕೂಟದಲ್ಲಿ ಭಾನುವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪಂ.ದೀನದಯಾಳ್ ಉಪಾಧ್ಯಾಯ ಮಹಾಭಿಯಾನದ ಪ್ರಶಿಕ್ಷಣ ವರ್ಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟಿಸಿದರು.
Published on
ಬಾಗಲಕೋಟೆ: ದೇಶ ವಿಭಜನೆಗಾಗಿ ಜನ್ಮ ತಾಳಿರುವುದು ಮುಸ್ಲಿಂ ಲೀಗ್. ಈಗ ಕಾಂಗ್ರೆಸ್ ಮುಸ್ಲಿಂ ಲೀಗ್ ಇದ್ದಂತೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಲೀಗ್‌ನ ಮುಖ್ಯಸ್ಥರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಹರಿ ಹಾಯ್ದರು.
ಬಾದಾಮಿ ತಾಲೂಕಿನ ಮಹಾಕೂಟದಲ್ಲಿ ಭಾನುವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪಂ.ದೀನದಯಾಳ್ ಉಪಾಧ್ಯಾಯ ಮಹಾಭಿಯಾನದ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಮುಸ್ಲಿಂ ಲೀಗ್ ಇದ್ದಂತೆ. ಮುಸ್ಲಿಂ ಲೀಗ್ ಕೇವಲ ಮುಸ್ಲಿಂರಿಗಾಗಿ ಹುಟ್ಟಿಕೊಂಡಿರುವ ಪಕ್ಷವಲ್ಲ. ದೇಶ ಇಬ್ಬಾಗ ಮಾಡುವುದು ಅದರ ಮುಖ್ಯ ಉದ್ದೇಶ. ರಾಹುಲ್ ಗಾಂಧಿ ಮೊಹಮ್ಮದ್ ಅಲಿ ಜಿನ್ನಾ ಇದ್ದಂತೆ ಅಂತ ಟೀಕಿಸಿದರು.
ಕೇರಳದಲ್ಲಿ ಮುಸ್ಲಿಂ ಲೀಗ್‌ನ ಬೆಂಬಲದೊ0ದಿಗೆ ಕಾಂಗ್ರೆಸ್ ಸರ್ಕಾರ ರಚಿಸುತ್ತಿದೆ. ಆ ಪಕ್ಷದಿಂದ ಗೆದ್ದವರೆಲ್ಲ ಮುಸ್ಲಿಂರು ಅವರನ್ನೆಲ್ಲ ಸಚಿವರನ್ನಾಗಿ ಮಾಡಲು ಕಾಂಗ್ರೆಸ್ ಹೊರಟಿದೆ. ಅಸ್ಸಾಂನಲ್ಲಿ ೧೯ ಜನರ ಪೈಕಿ ೧೮ ಮುಸ್ಲಿಂರು ಗೆದ್ದಿದ್ದಾರೆ. ಅಬ್ದುಲ್ ಬದ್ರುದ್ಧಿನ್ ಅವರೇ ಕಾಂಗ್ರೆಸ್ ಪಕ್ಷ ಮತ್ತೊಂದು ಮುಸ್ಲಿಂ ಆಗಿದೆ ಎಂದಿದ್ದಾರೆ. ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಸೇರಿ ೯೦ ಜನ ಗೆದ್ದಿದ್ದಾರೆ. ತಮಿಳುನಾಡಿನಲ್ಲಿ ೫ ಜನರ ಪೈಕಿ ೪ ಮುಸ್ಲಿಂರು ಗೆದ್ದಿದ್ದಾರೆ. ಮುಸ್ಲಿಂ ಲೀಗ್‌ನವರು ಪ್ರತ್ಯೇಕ ಬಜೆಟ್ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಕಾಂಗ್ರೆಸ್ ಬಾಂಗ್ಲಾ ನುಸುಳುಕೋರರ ಬಗ್ಗೆ ಮಾತನಾಡುವುದಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನೆಲ್ಲ ತಮ್ಮ ಬ್ರದರ್ ಎಂದು ಹೇಳಿಕೊಳ್ಳುತ್ತಾರೆ. ರಾಹುಲ್ ಗಾಂಽ ಅಪ್ರಬುದ್ಧ ತಂಡ ರಾಜಕಾರಣಿ ಎಂದು ಟೀಕಾ ಪ್ರಹಾರ ನಡೆಸಿದರು.
ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ, ಶಾಸಕರಾದ ಸಿದ್ದು ಸವದಿ, ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ವೀರಣ್ಣ ಚರಂತಿಮಠ, ಎಂ.ಕೆ.ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತರ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಟಿ.ಪಾಟೀಲ, ವಿಭಾಗ ಸಹಪ್ರಭಾರಿ ಬಸವರಾಜ ಯಂಕAಚಿ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net