ದೊಡ್ಡಬಳ್ಳಾಪುರದ ತಾಲೂಕು ಕಚೇರಿ ಮುಂದೆ ಚುನಾವಣಾಧಿಕಾರಿಗಳ ವಿರುದ್ಧ ಕಾಂಗ್ರೆಸ್, ಜೆಡಿಎಸ್ ಮುಖಂಡರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ವೆಂಕಟರಮಣಯ್ಯ, ವಕ್ತಾರ ಜಿ.ಲಕ್ಷಿ$್ಮಪತಿ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿಶ್ವನಾಥ್ ರೆಡ್ಡಿ, ಅಪ್ಪಿವೆಂಕಟೇಶ್, ಆದಿತ್ಯ ನಾಗೇಶ್, ಲಾವಣ್ಯಾ ನಾಗರಾಜ್, ರಾಮಾಂಜಿನಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ತಾಲೂಕು ಜೆಡಿಎಸ್ ವಕ್ತಾರ ಕುಂಟನಹಳ್ಳಿ ಮಂಜುನಾಥ್ ಇದ್ದರು.
ದೊಡ್ಡಬಳ್ಳಾಪುರ : ಡಿ.21ರಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರು ಚುನಾವಣಾಧಿಕಾರಿಗಳ ವಿರುದ್ಧ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಮಾತನಾಡಿ, ಬಾಶೆಟ್ಟಿಹಳ್ಳಿ ಪಪಂ ಚುನಾವಣೆಯಲ್ಲಿ ಬಳಸುವ ಇವಿಎಂ ಯಂತ್ರದ ಬ್ಯಾಲೆಟ್ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಚಿಹ್ನೆಗಳನ್ನು ಚಿಕ್ಕದಾಗಿ ಮುದ್ರಿಸಿ, ಇತರ ಪಕ್ಷದ ಚಿಹ್ನೆ ದೊಡ್ಡದಾಗಿ ಮುದ್ರಿಸಲಾಗಿದೆ, ಇದನ್ನು ಸರಿಪಡಿಸಬೇಕು ಎಂದರು.
ವಕ್ತಾರ ಜಿ.ಲಕ್ಷಿ$್ಮಪತಿ ಮಾತನಾಡಿ, ಲೋಪಗಳನ್ನು ಸರಿಪಡಿಸದಿದ್ದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಮುಂದಿನ ಚುನಾವಣಾ ಪ್ರಕ್ರಿಯೆಗೆ ಸಮ್ಮತಿ ಸೂಚಿಸುವುದಿಲ್ಲ. ಚುನಾವಣಾಧಿಕಾರಿಗಳು ಇದನ್ನು ಸರಿಪಡಿಸಲೇಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಬಂದ ಚುನಾವಣಾಧಿಕಾರಿಗಳು ಮನವಿ ಸ್ವೀಕರಿಸಿ, ಲೋಪವಾಗಿದ್ದರೆ ಸರಿಪಡಿಸಿ, ಚುನಾವಣಾ ಆಯೋಗದ ನಿಯಮದಂತೆ ಚಿಹ್ನೆ ಅಳವಡಿಸುವ ಭರವಸೆ ನೀಡಿದರು.