ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ಅವಿರೋಧವಾಗಿ ಆಯ್ಕೆ | G S Patil
ಜಿ.ಎಸ್.ಪಾಟೀಲ್
Published on:
Copied
Follow Us
ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರೋಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್(G S Patil) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿಸಿಎಂ ಜಿ.ಪರಮೇಶ್ವರ್ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಪೀಠಕ್ಕೆ ಕರೆತಂದು ಪೀಠಾಸಿನ ಮಾಡಿಸಿದ್ದಾರೆ.
ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಸೇರಿದವರು. ಈ ಹಿಂದೆ ಕರ್ನಾಟಕ ಖನಿಜ ನಿಗಮದ ಅಧ್ಯಕ್ಷರಾಗಿದ್ದರು. ನಿನ್ನೆ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ಡಿಕೆಶಿ ಮತ್ತು ಸಂಪುಟದ ಸದಸ್ಯರ ಸಮ್ಮುಖದಲ್ಲಿ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಅವರು, 38 ಮತ ಪಡೆದು ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿದ್ದ ಪೂಜಾರ ಪರವಾಗಿ 30 ಮತಗಳು ಬಿದ್ದಿವೆ.
ಸಲೀಂ ಅಹ್ಮದ್ ಅವರು ಹಾವೇರಿ ಮತ್ತು ಗದಗ ಜಿಲ್ಲೆ ಮತ್ತು ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು.