ಆದರೆ ಕಾಂಗ್ರೆಸ್ ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸುವ ಮೂಲಕ ಅಪಮಾನ ಎಸಗಿದ್ದಾರೆ. ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವರಾದ ಎಚ್ ಕೆ ಪಾಟೀಲ್ ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಆದ್ದರಿಂದ ಅವರು ಆ ಸ್ಥಾನದಲ್ಲಿ ಮುಂದುವರೆಯುವ ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು.