ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸುಮಾರು ಎರಡು ಗಂಟೆಗಳ ಸುದೀರ್ಘ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಇಂದಿನ ಸಭೆಯ ಚರ್ಚೆಯು ಕೇವಲ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳ ಸುತ್ತ ಮಾತ್ರ ನಡೆದಿತ್ತು. ಮಾಧ್ಯಮಗಳಲ್ಲಿ ನೀವೆಲ್ಲರೂ ಊಹಿಸುತ್ತಿರುವ ವದಂತಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ, ಇಡೀ ಚರ್ಚೆಯು ಕೇವಲ ರಾಜ್ಯಸಭೆ ಮತ್ತು ಎಂಎಲ್‌ಸಿ ಸ್ಥಾನಗಳ ಹಂಚಿಕೆಯ ಮೇಲೆ ಕೇಂದ್ರೀಕೃತವಾಗಿತ್ತು, ಆದ್ದರಿಂದ ಈ ರೀತಿಯ ವದಂತಿಗಳನ್ನು ನಿಲ್ಲಿಸುವಂತೆ ವಿನಂತಿಸಿದರು.