ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ ಸಿ ವೇಣುಗೋಪಾಲ್, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನೂತನ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಇದೇ ವೇಳೆ, ಕರ್ನಾಟಕದಲ್ಲಿ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲೂ ಡಿಕೆಶಿ ಅವರ ಸಮರ್ಥ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.