

ಪ್ರಮುಖ ಮುಖ್ಯಾಂಶಗಳು
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ ರಾಜ್ಯಾದ್ಯಂತ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆ ವ್ಯಾಪಕ ಪೊಲೀಸ್ ಬಂದೋಬಸ್ತ್ ನಡುವೆ ಭಾನುವಾರ ನಡೆಯಿತು. ವಿಜಯಪುರ ಜಿ¯್ಲÉ ತಿಕೋಟಾದ ಶ್ರೀ ಶಾರದಾಂಬಾ ಪಿಯು ಕಾಲೇಜು ಕೇಂದ್ರದಲ್ಲಿ ಒಎಂಆರ್ ಉತ್ತರಪತ್ರಿಕೆ ಮತ್ತು ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲ ಎಂಬ ಗೊಂದಲ ಸೃಷ್ಟಿಯಿಂದಾಗಿ ಕೆಲ ಅಭ್ಯರ್ಥಿಗಳು ತಮ್ಮ ಬಳಿ ಇದ್ದ ಒಎಂಆರ್ ಮತ್ತು ಪ್ರಶ್ನೆಪತ್ರಿಕೆ ಸಮೇತ ಕಾಂಪೌAಡ್ ಹಾರಿ ಹೊರನಡೆದು ಗಲಾಟೆ ನಡೆಸಿದರು.