ಕೊAಕಲ್ ಸರ್ಕಾರಿ ಶಾಲೆಗೆ ತಡೆಗೋಡೆ ನಿರ್ಮಿಸಿ

ವಡಗೇರಾ ತಾಲೂಕಿನ ಕೊಂಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ನಿಂತು ಕೆರೆಯಂತಾಗಿರುವುದು.
ವಡಗೇರಾ ತಾಲೂಕಿನ ಕೊಂಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಳೆ ನೀರು ನಿಂತು ಕೆರೆಯಂತಾಗಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಕೊಂಕಲ್ ಶಾಲೆಗೆ ಇಲ್ಲ ತಡೆಗೋಡೆ
  • ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ
ವಡಗೇರಾ: ತಾಲೂಕಿನ ಕೊಂಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣಕ್ಕೆ ಮಳೆ ನಿರು ನುಗ್ಗಿ ಕೆರೆಯಂತಾಗಿದ್ದು, ತಡಗೋಡೆ ಇಲ್ಲದ ಕಾರಣ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಕೂಡಲೇ ತಡೆಗೋಡೆ ನಿರ್ಮಿಸುವ ಮೂಲಕ ಮಳೆ ನೀರು ಆವರಣಕ್ಕೆ ಬರುವುದನ್ನು ತಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಮರಕಲ್ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಮಳೆ ಬಂದರೆ ಸಾಕು ಶಾಲಾ ಆವರಣದ ತುಂಬಾ ನೀರು ತುಂಬಿ ಕೆರೆಯಂತಾಗುತ್ತದೆ ಇದರಿಂದ ಮಕ್ಕಳಿಗೆ ಆಟವಾಡಲು ತುಂಬಾ ತೀವ್ರ ತೊಂದರೆಯಾಗಿದೆ. ಈ ಹಿಂದೆ ಅನೇಕ ಬಾರಿ ಪಿಡಿಒ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮಳೆ ನೀರು ಸಂಗ್ರಹವಾಗಿರುವುದರಿAದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಮಕ್ಕಳು ರೋಗದ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ. ಹೀಗಾಗಿ ಕೂಡಲೇ ಸಂಬAಽಸಿದ ಅಽಕಾರಿಗಳು ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದು ವೇಳೆ ವಿಳಂಬ ಮಾಡಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net