ಪರಿಸರ ಸಂರಕ್ಷಣೆ ಅಭಿವೃದ್ಧಿಯಷ್ಟೇ ಮುಖ್ಯವಾಗಿದೆ. ಯುವಪೀಳಿಗೆ ಸುಸ್ಥಿರ ಅಭಿವೃದ್ಧಿಯ ತತ್ವಗಳನ್ನು ಅಳವಡಿಸಿಕೊಂಡು, ಪ್ರಕೃತಿಗೆ ಸಂವೇದನಾಶೀಲರಾಗಿ ಮತ್ತು ಜವಾಬ್ದಾರಿಯುತ ನಾಗರಿಕರಾಗಬೇಕು. "ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ" ಅಂದರೆ, ಒಬ್ಬ ವ್ಯಕ್ತಿಗೆ ತನ್ನ ಕೆಲಸವನ್ನು ಮಾಡುವ ಹಕ್ಕಿದೆ, ಆದರೆ ಅದರ ಫಲಿತಾಂಶಗಳ ಬಗ್ಗೆ ಚಿಂತಿಸಬಾರದು. ಸರಳವಾಗಿ ಹೇಳುವುದಾದರೆ, ನಿಮ್ಮ ಕೆಲಸವನ್ನು ಸಂಪೂರ್ಣ ಸಮರ್ಪಣೆಯಿಂದ ಮಾಡಿ ಮತ್ತು ಫಲಿತಾಂಶಗಳ ಬಗ್ಗೆ ಚಿಂತಿಸಬೇಡಿ. ಈ ದಿನ ಪದವಿ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಯು ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳೊಂದಿಗೆ ಸಜ್ಜಾಗಿದ್ದಾರೆ. ಆ ಜ್ಞಾನವನ್ನು ಸಮಾಜದ ಕಲ್ಯಾಣಕ್ಕಾಗಿ ಉಪಯೋಗಿಸಿಕೊಳ್ಳಿ” ಎಂದು ಕರೆ ನೀಡಿದರು.