ಎಂ.ಆರ್.ಸಿ ರವಿಕುಮಾರ್ ಮಾತನಾಡಿ, ಡಿಕೆಶಿ ಅವರು ಸಂಕಷ್ಟದ ಸಂದರ್ಭಗಳಲ್ಲಿ ಪಕ್ಷವನ್ನು ಮುನ್ನಡೆಸಿ, ರಾಷ್ಟ್ರಮಟ್ಟದಲ್ಲಿ ಟ್ರಬಲ್ಶೂಟರ್ ಎಂದು ಗುರುತಿಸಿಕೊಂಡವರು. ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ ಎಂದರು. ಡಿಕೆಶಿ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವ ಜತೆಗೆ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜುಗೊಳಿಸುವ ವಿಶ್ವಾಸವಿದೆ. ಮುಂದಿನ ಅವಧಿಯಲ್ಲೂ ಅವರೇ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಆಶಯ ಎಂದರು.