ಹಿರೇಮೇಗಳಗೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಭೇಟಿ ನೀಡಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಬಿಇಒ ಎಚ್.ಲೇಪಾಕ್ಷಪ್ಪ, ತಾಪಂ ಇಒ ಚಂದ್ರಶೇಖರ, ನರೇಗಾ ಸಹಾಯಕ ನಿರ್ದೇಶಕ ಯು.ಎಚ್ ಸೋಮಶೇಖರ, ಪ್ರಮುಖರಾದ ಯಮುನಾ ನಾಯ್ಕ, ಬಸವರಾಜ ಇತರರಿದ್ದರು.
ಹರಪನಹಳ್ಳಿ: ತಾಲೂಕಿನ ವಿವಿಧ ಗ್ರಾಮಗಳಿಗೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಬುಧವಾರ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಹಿರೇಮೇಗಳಗೇರಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣ ಅವಶ್ಯವಾಗಿದೆ. ಶಾಲೆಗೆ ಮಂಜೂರಾಗಿರುವ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಬೇಕು. ಶೌಚಗೃಹ, ಅಡುಗೆ ಕೋಣೆ ಸೇರಿದಂತೆ ಏಳು ಕೊಠಡಿಗಳು ಮಂಜೂರಾಗಿವೆ. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು. ಈ ವೇಳೆ ಬಿಸಿಯೂಟ ಪರಿಶೀಲಿಸಿ, ಗುಣಮಟ್ಟದ ಆಹಾರದ ಜತೆಗೆ ಸ್ವಚ್ಛತೆಗೆ ಮಹತ್ವ ನೀಡಬೇಕು ಎಂದು ಶಾಸಕಿ ಲತಾ ಮಲ್ಲಿಕಾರ್ಜುನ ತಿಳಿಸಿದರು.