_1768482652461.webp?w=480&auto=format%2Ccompress&fit=max)
_1768482652461.webp?w=480&auto=format%2Ccompress&fit=max)
ಧಾರವಾಡ: ನಗರದ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಸಾಪೂರ ಗ್ರಾಮದ ಈಶ್ವರಪ್ಪ ಮಹಾಲಿಂಗಪ್ಪ ಪೂಜಾರ (47) ಆತ್ಮಹತ್ಯೆ ಮಾಡಿಕೊಂಡ ಕೈದಿ. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಈತ, ಹಗ್ಗದಿಂದ ನೇಣಿಗೆ ಶರಣಾಗಿದ್ದಾನೆ. ಎಸಿಪಿ ಪ್ರಶಾಂತ ಸಿದ್ದನಗೌಡರ ಮತ್ತು ಉಪನಗರ ಠಾಣೆ ಇನ್‌ಸ್ಪೆಕ್ಟರ್ ಪ್ರಭು ಗಂಗೇನಹಳ್ಳಿ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.