ಮಾಗಡಿಯ ಹೊಂಬಾಳಮ್ಮನ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್. ಬಸವರಾಜು ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿದರು. ಪುರಸಭೆ ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ರೇವಣ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಎಂ.ಆರ್. ಮಂಜುನಾಥ್, ಶಶಿಧರ್, ಕೆಂಚನಹಳ್ಳಿ ಕಿರಣ್ ಇತರರಿದ್ದರು.
Published on:
Copied
Follow Us
ಮಾಗಡಿ :
ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳೇ ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್.ಬಸವರಾಜು ತಿಳಿಸಿದರು.
ಹೊಂಬಾಳಮ್ಮನ ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಬ್ಯಾಗ್ ವಿತರಿಸಿ ಮಾತನಾಡಿ, ಇದೇ ಶಾಲೆಯಲ್ಲಿ ಓದಿದ ವಿದ್ಯಾರ್ಥಿಯೊಬ್ಬರು ಪ್ರಸ್ತುತ ಹಾಸನ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜತೆಗೆ ಹಲವರು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ್ದಾರೆ. ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಂಡು, ಸಮಾಜಕ್ಕೆ ಕೊಡುಗೆ ನೀಡುವ ಉತ್ತಮ ವ್ಯಕ್ತಿಯಾಗುತ್ತೇನೆ ಎಂಬ ಸ್ಪಷ್ಟ ಗುರಿಯೊಂದಿಗೆ ಅಭ್ಯಾಸ ಮಾಡಿದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಪ್ರಸ್ತುತ ಹೊಂಬಾಳಮ್ಮನ ಪೇಟೆ ಶಾಲೆಯಲ್ಲಿ 79 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಪ್ರತಿ ಗ್ರಾಪಂ ವ್ಯಾಪ್ತಿಗೊಂದು ಕೆಪಿಎಸ್ ಶಾಲೆ ಆರಂಭಿಸುತ್ತಿರುವುದು ಸ್ವಾಗತಾರ್ಹ. ಜತೆಗೆ ಗಡಿ ಭಾಗದ ಸರ್ಕಾರಿ ಶಾಲೆಗಳಿಗೂ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು.
ಶಂಕರ್, ಕೆಂಪಣ್ಣ, ರಾಮಕೃಷ್ಣ, ನರಸಿಂಹಮೂರ್ತಿ, ಮುಖ್ಯ ಶಿಕ್ಷಕ ಲಿಂಗರಾಜು, ಉಮೇಶ್, ಪಾಂಡುರಂಗಸ್ವಾಮಿ, ಬಿ.ಎನ್. ಜಯರಾಮು, ಯಜಮಾನ್ ರೇವಣ್ಣ ಇತರರು ಇದ್ದರು.