ಮತದಾರ ಪಟ್ಟಿ ಪರಿಷ್ಕರಣೆಗೆ ಸಹಕಾರ ಅಗತ್ಯ

ಗುರುಮಠಕಲ್​ದಲ್ಲಿ ಶನಿವಾರ ಮನೆ-ಮನೆಗೆ ಭೇಟಿ ನೀಡಿ ಎಸ್​ಐಆರ್​ ಪರಿಷ್ಕರಣೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ್​ ಪರಿಶೀಲಿಸಿದರು. ಜಿಪಂ ಸಿಇಒ ಲವೀಶ್​ ಒರ್ಡಿಯಾ, ಶ್ರೀಧರ್​ ಗೋಟೂರ, ಚನ್ನಮಲ್ಲಪ್ಪ ಘಂಟಿ, ಭಾರತಿ ಸಜ್ಜನ್​, ಶರಣಪ್ಪ ಎಂ., ಹನುಮಂತರಾವ್​ ಗೋಂಗ್ಲೆ ಇತರರಿದ್ದರು.
ಗುರುಮಠಕಲ್​ದಲ್ಲಿ ಶನಿವಾರ ಮನೆ-ಮನೆಗೆ ಭೇಟಿ ನೀಡಿ ಎಸ್​ಐಆರ್​ ಪರಿಷ್ಕರಣೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ್​ ಪರಿಶೀಲಿಸಿದರು. ಜಿಪಂ ಸಿಇಒ ಲವೀಶ್​ ಒರ್ಡಿಯಾ, ಶ್ರೀಧರ್​ ಗೋಟೂರ, ಚನ್ನಮಲ್ಲಪ್ಪ ಘಂಟಿ, ಭಾರತಿ ಸಜ್ಜನ್​, ಶರಣಪ್ಪ ಎಂ., ಹನುಮಂತರಾವ್​ ಗೋಂಗ್ಲೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೈನ್​ ಅಭಿಮತ
  • ಗುರುಮಠಕಲ್​ನಲ್ಲಿ ಅಭಿಯಾನಕ್ಕೆ ಚಾಲನೆ
ಗುರುಮಠಕಲ್​: ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಪರಿಷ್ಕರಣೆ (ಎಸ್​ಐಆರ್​-2026) ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್​ ಜೈನ್​ ಹೇಳಿದರು.
ಪಟ್ಟಣದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಅಧಿಕಾರಿಗಳು, ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತದಾರರ ಪಟ್ಟಿಯ ನಿಖರತೆ ಮತ್ತು ಪಾರದರ್ಶಕತೆ ಕಾಪಾಡುವ ಉದ್ದೇಶದಿಂದ ಎಸ್​ಐಆರ್​ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಮನೆ ಹಾಗೂ ನೆರೆಹೊರೆಯವರಿಗೆ ಎಸ್​ಐಆರ್​ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದಿಂದ ಮಾತ್ರ ಈ ಅಭಿಯಾನ ಯಶಸ್ಸು ಆಗಲು ಸಾಧ್ಯ ಎಂದರು.
ಮನೆ ಯಜಮಾನರೊಂದಿಗೆ ಮಾತನಾಡಿ, ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ನಿಖರ ಮಾಹಿತಿ ಸಂಗ್ರಹಿಸುವಂತೆ ಬಿಎಲ್​ಒಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್​ ಒರ್ಡಿಯಾ ಮಾತನಾಡಿ, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರಗೊಳಿಸಲು ವಿಶೇಷ ಪರಿಷ್ಕರಣೆ ಕೈಗೊಳ್ಳಲಾಗಿದೆ. ನಕಲಿ ಹೆಸರುಗಳು, ಮೃತಪಟ್ಟವರು ಹಾಗೂ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವ ಮತದಾರರ ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುವುದು ಎಂದರು.
ಈ ವೇಳೆ ಸಹಾಯಕ ಆಯುಕ್ತ ಶ್ರೀಧರ್​ ಗೋಟೂರ, ತಹಸೀಲ್ದಾರ್​ ಚನ್ನಮಲ್ಲಪ್ಪ ಘಂಟಿ, ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಭಾರತಿ ಸಜ್ಜನ್​, ಪುರಸಭೆ ಮುಖ್ಯಾಧಿಕಾರಿ ಶರಣಪ್ಪ ಎಂ., ರಾಜ್ಯ ಮಟ್ಟದ ತರಬೇತುದಾರ ಹನುಮಂತರಾವ್​ ಗೋಂಗ್ಲೆ, ಪ್ರಾಚಾರ್ಯ ಮಲ್ಲಿಕಾರ್ಜುನ ಹೊಸಮನಿ, ಪಿಎಸ್​ಐ ಅಲ್ಲಾಬ್​ ಶಾಬಾದಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net