ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಡಿಪ್ಲೊಮಾ ಕೋರ್ಸ್ ಆರಂಭ

ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಡಿಪ್ಲೊಮಾ ಕೋರ್ಸ್
ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಡಿಪ್ಲೊಮಾ ಕೋರ್ಸ್
Published on

ಪ್ರಮುಖ ಮುಖ್ಯಾಂಶಗಳು

  • ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಡಿ.31ರೊಳಗೆ ಅರ್ಜಿ ಸಲ್ಲಿಸಿ
  • ತರಬೇತಿ ಪಡೆಯುವ ಎಲ್ಲ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಶಿಷ್ಯವೇತನ
  • ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ ಅರ್ಜಿದೊರೆಯಲಿವೆ.
ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವತಿಯಿಂದ 6 ತಿಂಗಳ ಅವಧಿಯ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಡಿಪ್ಲೊಮಾ ಕೋರ್ಸ್ ಆರಂಭಿಸುತ್ತಿದೆ.
2026ರ ಜನವರಿಯಲ್ಲಿ ಕೋರ್ಸ್ ಆರಂಭವಾಗಲಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಡಿ.31ರೊಳಗೆ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ತರಬೇತಿ ಪಡೆಯುವ ಎಲ್ಲ ಅಭ್ಯರ್ಥಿಗಳಿಗೆ ಮಾಸಿಕ 500 ರೂ. ಶಿಷ್ಯವೇತನ ನೀಡಲಾಗುತ್ತದೆ. ಅರ್ಜಿಗಳನ್ನು ಬೆಂ.ನಗರ/ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಯ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ ಅರ್ಜಿದೊರೆಯಲಿವೆ. ಹೆಚ್ಚಿನ ಮಾಹಿತಿಗೆ 9449007661 ಅಥವಾ 7892374351 ಸಂಪರ್ಕಿಸಬಹುದು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net