ಹತ್ತಿಗಿಡ ಓಣಿ ಒತ್ತುವರಿ ತೆರವು

ಮಾವನೂರು ಕೂಡಿಗೆಯಿಂದ ಅಗಸರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹತ್ತಿಗಿಡ ಓಣಿಯನ್ನು ತಹಸೀಲ್ದಾರ್ ಎಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಮಾವನೂರು ಕೂಡಿಗೆಯಿಂದ ಅಗಸರಹಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹತ್ತಿಗಿಡ ಓಣಿಯನ್ನು ತಹಸೀಲ್ದಾರ್ ಎಚ್. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಹುಣಸುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ
  • ಕೂಡಿಗೆಯಿಂದ ಅಗಸರಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹತ್ತಿಗಿಡ ಓಣಿ

ಆಲೂರು: ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವನೂರು ಕೂಡಿಗೆಯಿಂದ ಅಗಸರಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹತ್ತಿಗಿಡ ಓಣಿಯಲ್ಲಿ ಒತ್ತುವರಿಯಾಗಿದ್ದ ರಸ್ತೆಯನ್ನು ಗುರುವಾರ ತಹಸೀಲ್ದಾರ್ ಮಲಿಕಾರ್ಜುನ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಮುಖ್ಯ ರಸ್ತೆಯ ಜಾಗವನ್ನು ಕೆಲವು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡು ಜಾನುವಾರು, ವಾಹನಗಳು, ಜನಸಾಮಾನ್ಯರು ಹಾಗೂ ಓಡಾಡದಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತಹಸೀಲ್ದಾರ್‌ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದರು.
ಇದರಿಂದ ಕಾರ್ಯಪ್ರವೃತ್ತರಾದ ತಹಸೀಲ್ದಾರ್ ಮಲ್ಲಿಕಾರ್ಜುನ, ಸರ್ವೇ ಕುಮಾರ್, ಗ್ರಾಮ ಆಡಳಿತಾಧಿಕಾರಿ ಸಂಜೀವ ಚವ್ಹಾಣ್ ಮತ್ತು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ರಸ್ತೆ ಒತ್ತುವರಿ ತೆರವುಗೊಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net