ಕಂಟೇನರ್​ ಡಿಕ್ಕಿಯಾಗಿ ದಂಪತಿ ಸಾವು

Couple dies after being hit by a container truck
Couple dies after being hit by a container truck
Published on

ತಾಲೂಕಿನ ಲಿಂಗಶೆಟ್ಟಿಪುರ ಗೇಟ್​ ಬಳಿ ಲಾರಿ ಕಂಟೇನರ್​ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಉತ್ತರಪ್ರದೇಶ ಮೂಲದ ದಂಪತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗ್ರಾಮಸ್ಥರ ಪ್ರತಿಭಟನೆ

ಅಪಘಾತ ಸಂಭವಿಸುತ್ತಿದ್ದಂತೆ ಆಕ್ರೋಶಗೊಂಡ ಸ್ಥಳಿಯರು ಬ್ಯಾರಿಕೇಡ್​ ರಸ್ತೆಗೆ ಅಡ್ಡ ಹಾಕಿ, ಸಂಚಾರ ತಡೆದು ಪ್ರತಿಭಟಿಸಿದರು. ಲಿಂಗಶೆಟ್ಟಿಪುರ ಗೇಟ್​ ಬಳಿ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು ಟ್ರಾಫಿಕ್​ ಜಾಮ್​, ಅತಿ ವೇಗದ ಸಂಚಾರಕ್ಕೆ ಕಡಿವಾಣ ಹಾಕಲು ಮೇಲ್ಸೇತುವೆ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು. ಧಿಕ್ಕಾರದ ೂಷಣೆಗಳನ್ನು ಕೂಗಿದರು.

ಅಮನ್​ ದೇವ್​ ಮಿಶ್ರಾ(26) ಮತ್ತು ಅವರ ಪತ್ನಿ (ಹೆಸರು ತಿಳಿದು ಬಂದಿಲ್ಲ) ಮೃತರು. ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಈಶ ಆದಿಯೋಗಿ ಕೇಂದ್ರಕ್ಕೆ ಭೇಟಿ ನೀಡಿ ಭಾನುವಾರ ಮತ್ತೆ ಊರಿಗೆ ವಾಪಸ್ಸಾಗುತ್ತಿದ್ದರು. ಇದೇ ವೇಳೆ ಲಿಂಗಶೆಟ್ಟಿಪುರ ಬಳಿಯ ಹೆದ್ದಾರಿಯಲ್ಲಿ ತಿರುವು ಪಡೆಯುತ್ತಿದ್ದಾಗ ಬಾಗೇಪಲ್ಲಿ ಕಡೆಯಿಂದ ಬಂದ ಕಂಟೇನರ್​ ಡಿಕ್ಕಿ ಹೊಡೆದಿದೆ. ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಮೃತದೇಹಗಳನ್ನು ಮರಣೋತ್ತರ ಪರೀೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net