ವಿದ್ಯಾರ್ಥಿಗಳ ಮೊಬೈಲ್‌ಗೆ ಕೋರ್ಸ್‌ವರ್ಕ್ ಪರೀಕ್ಷೆ ಫಲಿತಾಂಶ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ವಿಷಯವಾರು ವಿಭಾಗಗಳಲ್ಲಿ 3,913 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಎಲ್ಲ ವಿದ್ಯಾರ್ಥಿಗಳಿಗೆ ತಾವು ಈ ಮೊದಲೇ ನೋಂದಾಯಿಸಿದ್ದ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು
  • ಅಂಕಪಟ್ಟಿ ಲಿಂಕ್ ಸಹ ನೀಡಲಾಗಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಲಿಂಕ್ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
  • ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರ್ಸ್ ವರ್ಕ್‌ನ ಫಲಿತಾಂಶವನ್ನು ಮೊಬೈಲ್ ಸಂದೇಶದ ಮೂಲಕ ಕಳುಹಿಸಲಾಗಿದೆ.
ಬೆಂಗಳೂರು:: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಇತ್ತೀಚಿಗೆ ನಡೆಸಿದ ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ಫಲಿತಾಂಶವು ಇನ್ನು ಮುಂದೆ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಬರಲಿದೆ.
ಪಿಎಚ್.ಡಿ ಕೋರ್ಸ್ ವರ್ಕ್ ಪರೀಕ್ಷೆಯ ವಿಷಯವಾರು ವಿಭಾಗಗಳಲ್ಲಿ 3,913 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಈ ಎಲ್ಲ ವಿದ್ಯಾರ್ಥಿಗಳಿಗೆ ತಾವು ಈ ಮೊದಲೇ ನೋಂದಾಯಿಸಿದ್ದ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ವೇಳೆ ಅಂಕಪಟ್ಟಿ ಲಿಂಕ್ ಸಹ ನೀಡಲಾಗಿದ್ದು, ವಿದ್ಯಾರ್ಥಿಗಳು ಸುಲಭವಾಗಿ ಲಿಂಕ್ ಕ್ಲಿಕ್ ಮಾಡಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೋರ್ಸ್ ವರ್ಕ್‌ನ ಫಲಿತಾಂಶವನ್ನು ಮೊಬೈಲ್ ಸಂದೇಶದ ಮೂಲಕ ಕಳುಹಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಹುಡುಕಾಟ ನಡೆಸುವ ಅವಶ್ಯಕತೆ ಇಲ್ಲ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪಿಎಚ್.ಡಿ ಮುಂದುವರಿಸಬಹುದಾಗಿದೆ ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ. ಯು.ಜೆ. ಉಜ್ವಲ್ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net