ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ

ಅತ್ಯಾಚಾರಿಗೆ ಶಿಕ್ಷೆ ಪ್ರಕಟ
ಅತ್ಯಾಚಾರಿಗೆ ಶಿಕ್ಷೆ ಪ್ರಕಟ
Published on

ಪ್ರಮುಖ ಮುಖ್ಯಾಂಶಗಳು

  • ಅಪರಾಧಿಗೆ ಶಿಕ್ಷೆ ಪ್ರಕಟ
  • ನೇಸರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
  • ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ
ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ: ಅಪ್ರಾಪ್ತತೆಯನ್ನು ಪುಸಲಾಯಿಸಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಅತ್ಯಾಚಾರ ಎಸಗಿದ್ದ ಗೋಕಾಕ ತಾಲೂಕಿನ ಹೀರೆಹಟ್ಟಿ ಗ್ರಾಮದ ನಿವಾಸಿ ಲಕ್ಷ್ಮಣ ಹನುಮಂತ ಮುರಗೋಡ(೨೮) ಎಂಬುವ ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.  
ಬಾಲಕಿಯ ಮೇಲೆ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರವೆಸಗಿದ್ದ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ ೨೦೨೨ರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಯುಹೆಚ್ ಸಾತೇಹಳ್ಳಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಕಾರದಿಂದ 4 ಲಕ್ಷ.ರೂ ಪರಿಹಾರ ಧನ ನೀಡುವಂತೆ ಆದೇಶಿಸಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net