ನಿರ್ದೇಶಕರಾಗಿ ಸಿ.ಪಿ ರಘು ಆಯ್ಕೆ

ಸಿ.ಪಿ.ರಘು
ಸಿ.ಪಿ.ರಘು
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಾಗಿ ಸಿ.ಪಿ.ರಘು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯಾಗಿದ್ದಾರೆ. ರೈತರ ಹಾಗೂ ಸಂಘದ ಸದಸ್ಯರ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಸವಲತ್ತುಗಳನ್ನು ತಲುಪಿಸಲಾಗುವುದು. ಪಶು ಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಗ್ಯಾರಂಟಿ ಅನುಷ್ಠಾನ ಮತ್ತು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಸಿ.ಪಿ.ರಘು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net