

ಪ್ರಮುಖ ಮುಖ್ಯಾಂಶಗಳು
ಬೆಂಗಳೂರು:
ಸಾರಿಗೆ ಇಲಾಖೆ ನಿಯಮ ಉಲ್ಲಂಸಿ ಬೈಕ್ ಟ್ಯಾಕ್ಸಿ ನಡೆಸುತ್ತಿದ್ದವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಆರ್‌ಟಿಒ ಅಧಿಕಾರಿಗಳ 300ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಬೈಕ್ ಟ್ಯಾಕ್ಸಿ, ರ‌್ಯಾಪಿಡೋ ಹೆಸರಿನಲ್ಲಿ ನಡೆಸುತ್ತಿದ್ದವರ ವಿರುದ್ಧ ಈ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಯಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಗರದಲ್ಲಿ ಸಾರ್ವಜನಿಕರ ಸಾರಿಗೆ ವಾಹನ, ಕಾರುಗಳಿಗಿಂತ ಹೆಚ್ಚಾಗಿ ದ್ವಿಚಕ್ರವಾಹನಗಳ ಸಂಖ್ಯೆ ಹೆಚ್ಚಿದೆ. ರಾಜ್ಯ ಸೇರಿ ವಿವಿಧ ಕಡೆಗಳಿಂದ ಬಂದವರು ನಗರದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಓಡಿಸುತ್ತಿದ್ದಾರೆ. ಇದರಿಂದ ಆಟೋ ರೀಕ್ಷ, ಟ್ಯಾಕ್ಸಿ ಚಾಲಕರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಹಲವು ವರ್ಷಗಳಿಂದ ಬೈಕ್‌ಟ್ಯಾಕ್ಸಿದಾರರ ವಿರುದ್ದ ಆರೋಪಗಳು ಕೇಳಿ ಬರುತ್ತಿದ್ದವು. ಎಚ್ಚೆತ್ತ ಅಧಿಕಾರಿಗಳು ವೈಟ್‌ಬೋರ್ಡ್ ಬೈಕ್‌ಗಳನ್ನು ಬಾಡಿಗಾಗಿ ಬಳಕೆ ಮಾಡುತ್ತಿರುವವರ ವಿರುದ್ಧ ಸಮರ ಸಾರಿದ್ದಾರೆ.