ಪಟ್ಟಣದ ಸುವರ್ಣಮುಖಿ ಲಕ್ಷಿ$್ಮನರಸಿಂಹಸ್ವಾಮಿ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಡ್ರಗ್ಸ್ಮುಕ್ತ ಕರ್ನಾಟಕ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಯುವಜನತೆ ದೇಶದ ಅಮೂಲ್ಯ ಶಕ್ತಿಯಾಗಿದ್ದು, ಅವರನ್ನು ಮಾದಕ ವ್ಯಸನ, ಅಪರಾಧ ಚಟುವಟಿಕೆ ಹಾಗೂ ಸಮಾಜಘಾತಕ ಕೃತ್ಯಗಳಿಂದ ದೂರವಿಡುವುದು ಪಾಲಕರ ಮತ್ತು ಸಮಾಜದ ಜವಾಬ್ದಾರಿ ಎಂದರು.