ಬೆಳೆ ವಿಮೆ ಯೋಜನೆ ಕುರಿತಂತೆ ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಜುಲೈ ಮೂರನೇ ವಾರ ಆರಂಭವಾದರೂ ಮಳೆ ಕೊರತೆ ಇದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬರಗಾಲ ಎದುರಾಗುವ ಸಾಧ್ಯತೆ ಇದೆ. ಆಷಾಢದಲ್ಲೂ ಬೇಸಿಗೆ ವಾತಾವರಣವಿದೆ. ಮುಸುಕಿನ ಜೋಳಕ್ಕೆ ಬಿಳಿಸುಳಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅರ್ಹ ರೈತರು ವಿಮೆಯಿಂದ ವಂಚಿತರಾಗದಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಬ್ಯಾಂಕ್‌ಗಳು, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.