ವಸತಿ ನಿಲಯದಲ್ಲಿ ಮನೆ ವಾತಾವರಣ ನಿರ್ಮಾಣ

ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ವಸತಿ ನಿಲಯ ವಾಸ್ತವ್ಯ, ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು. ಡಾ.ಆನಂದ ಕೆ., ಮಹೇಶ ಪೋತದಾರ, ಭವಾನಿ ಪಾಟೀಲ ಮತ್ತಿತರರಿದ್ದಾರೆ.
ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ವಸತಿ ನಿಲಯ ವಾಸ್ತವ್ಯ, ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು. ಡಾ.ಆನಂದ ಕೆ., ಮಹೇಶ ಪೋತದಾರ, ಭವಾನಿ ಪಾಟೀಲ ಮತ್ತಿತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿಕೆ
  • ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭ
ವಿಜಯಪುರ: ವಸತಿ ನಿಲಯಗಳು ಮಕ್ಕಳ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳು. ಅಂತಹ ಕೇಂದ್ರಗಳಲ್ಲಿ ಮಕ್ಕಳ ಓದಿಗೆ ಪೂರಕವಾಗಿ ಅವರ ಉತ್ತಮ ವ್ಯಕ್ತಿತ್ವ ರೂಪಿಸುವ ನಿಟ್ಟಿನಲ್ಲಿ ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ನಗರದ ಸ್ಟೇಶನ್ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ 2025-26ನೇ ಸಾಲಿನ ವಸತಿ ನಿಲಯ ವಾಸ್ತವ್ಯ, ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್‌ಗಳಾಗಿ ನೇಮಿಸಿದ್ದು, ಮೆಂಟರ್‌ಗಳು ತಮಗೆ ನಿಯೋಜಿಸಿದ ವಸತಿ ನಿಲಯಗಳಿಗೆ ಆಗಾಗ ತೆರಳಿ ಮಕ್ಕಳೊಂದಿಗೆ ಬೆರೆತು ಅವರ ಕಲಿಕೆ ಮನೋಸ್ಥೈರ್ಯ ಬೆಳೆಸುವುದು ಮತ್ತು ನಿಲಯ ಪಾಲಕರ ಜತೆಗೂಡಿ ಹಾಸ್ಟೇಲ್ ಸುಧಾರಣೆ ಮಾಡುತ್ತಿದ್ದಾರೆ. ಅಲ್ಲದೇ. ಮೂಲ ಸೌಕರ್ಯಗಳು ಕೊರತೆ ಎದುರಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಮೆಂಟರ್‌ಗಳು ವಸತಿ ನಿಲಯದ ಮಕ್ಕಳ ಆರೋಗ್ಯದ ಕಡೆಗೆ ಗಮನ ನೀಡುತ್ತಿದ್ದು, ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯ ಔಷಧೋಪಚಾರ ಒದಗಿಸುವ ಮೂಲಕ ಮಕ್ಕಳಲ್ಲಿ ನಮ್ಮೊಂದಿಗಿದ್ದಾರೆ ಎಂಬ ಮನೋಭಾವ ಮೂಡುವಂತೆ ಮಾಡುತ್ತಿದ್ದು, ಜತೆಗೆ ಮನೆಯಿಂದ ದೂರ ಇರುವ ಭಾವನೆ ಬರದಂತೆ ನೋಡಿಕೊಳ್ಳಲಾಗುತ್ತಿದೆ. ಅದರಿಂದ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುವ, ಜೀವನದಲ್ಲಿ ಹಿಂಜರಿಯುವ ಪ್ರಮೇಯವೇ ಉದ್ಭವಿಸುವುದಿಲ್ಲ. ಹಾಸ್ಟೆಲ್ ಮೆಂಟರ್ಸ್‌ಗಳು ಸ್ವಯಂ ಪ್ರೇರಿತರಾಗಿ ಕಾರ್ಯ ನಿರ್ವಹಿಸುವ ಮೂಲಕ ಮಕ್ಕಳ ಸುಂದರ ಕನಸಿಗೆ ಎಳೆವೆಯಲ್ಲಿ ಬಲ ತುಂಬುತ್ತಿದ್ದಾರೆ ಎಂದು ತಿಳಿಸಿದರು.
ವಸತಿ ನಿಲಯಗಳಲ್ಲಿ ಮಕ್ಕಳ ಕಲಿಕೆಯ ಬಗ್ಗೆ ಆದ್ಯತೆ, ಜೀವನದ ಸಾರ ಅರ್ಥೈಹಿಸಿಕೊಳ್ಳಲಿಕ್ಕೆ ಶಿಕ್ಷಣ ಬಹುಮುಖ್ಯವಾಗಿದೆ. ಮಕ್ಕಳು ಪ್ರಶ್ನೆ ಕೇಳುವ ಮನೋಭಾವ ಹೊಂದಬೇಕು. ಓದಿದ್ದನ್ನು ಸಹಪಾಠಿಗಳೊಂದಿಗೆ ಪರಸ್ಪರ ಚರ್ಚಿಸಬೇಕು. ಆರೋಗ್ಯಕರ ಚರ್ಚೆ ಕಲಿಕೆಗೆ ಪೂರಕವಾಗಿ ಮಾತ್ರವಲ್ಲದೇ, ಅದು ಶಾಶ್ವತ ನೆನಪಿಟ್ಟುಕೊಳ್ಳಲು ಸಹಕಾರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಪ್ರಾಸ್ತಾವಿಕ ಮಾತನಾಡಿದರು. ಸಿಂದಗಿ ತಾಲೂಕಿನ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ಬಸವನಬಾಗೇವಾಡಿ ತಾಲೂಕಿನ ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಸಹಾಯಕ ನಿರ್ದೇಶಕ ಉಮೇಶ ಲಮಾಣಿ, ನಿರಾಶ್ರಿತರ ಪರಿಹಾರ ಕೇಂದ್ರದ ಪದ್ಮಜಾ ಪಾಟೀಲ, ಟಿ.ಬಿ. ಮಂಟೂರ, ಅರವಿಂದ ಲಂಬು, ಕೆ.ಬಿ. ಕೋರೆ, ಲೆಕ್ಕ ಅಧೀಕ್ಷಕ ಎಂ.ಟಿ. ಬಿರಾದಾರ, ಸತೀಶ ಸಜ್ಜನ, ಸದಾನಂದ ಬಡಿಗೇರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net