ಈ ಕುರಿತು ಪ್ರತಿಕ್ರಿಯಿಸಿದ ವೇದಿಕೆ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ನಗರದ ಅಂಚಿನಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನಿನ ತಿರುಚಿದ ದಾಖಲೆಗಳನ್ನು ಇಟ್ಟುಕೊಂಡು ಭೂಗಳ್ಳರು ಖಾತೆ ಮಾಡಿಕೊಡುವಂತೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ದೂರು ಸಲ್ಲಿಸಿ, ಖಾತೆ ಪಡೆಯಲು ಆದೇಶ ಪಡೆದಿದ್ದಾರೆ. ಉಪವಿಭಾಗಾಧಿಕಾರಿ ಆದೇಶವನ್ನು ಜಿಲ್ಲಾಧಿಕಾರಿ ರದ್ದುಗೊಳಿಸಿ, ಸರ್ಕಾರದ ವಶಕ್ಕೆ ಪಡೆದಿದ್ದಾರೆ. ಇದರ ಹೊರತಾಗಿಯೂ, ಭೂ ಸುರಾ ಯೋಜನೆ ಬಳಸಿಕೊಂಡ ಭೂಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸರ್ಕಾರಿ ಜಾಗ ಕಬಳಿಸಲು ಹುನ್ನಾರ ರೂಪಿಸಿದ್ದಾರೆ. ಈ ದಾಖಲೆ ಸೃಷ್ಟಿಸಲು ಸಹಕರಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.