ವಿದ್ಯಾರ್ಥಿಗಳ ಸಾಧನೆಯಿಂದ ಎಲ್ಲರಿಗೂ ಕೀರ್ತಿ

ಚನ್ನರಾಯಪಟ್ಟಣದ ಜ್ಞಾನಸಾಗರ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ರೋಹನ್ ಹಾಸನ ರಾಯಲ್ ಅಪೋಲೊ ಸ್ಕೂಲ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆ ವತಿಯಿಂದ ಇತ್ತೀಚೆಗೆ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದರು.  ವಿಬಿ
ಚನ್ನರಾಯಪಟ್ಟಣದ ಜ್ಞಾನಸಾಗರ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿ ರೋಹನ್ ಹಾಸನ ರಾಯಲ್ ಅಪೋಲೊ ಸ್ಕೂಲ್‌ನಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆ ವತಿಯಿಂದ ಇತ್ತೀಚೆಗೆ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದರು. ವಿಬಿ
Published on
ಚನ್ನರಾಯಪಟ್ಟಣ: ಹಾಸನ ರಾಯಲ್ ಅಪೋಲೊ ಶಾಲೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ಪಟ್ಟಣದ ಜ್ಞಾನಸಾಗರ ಶಾಲೆ ವಿದ್ಯಾರ್ಥಿ ರೋಹನ್‌ನನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.

ನಂತರ ಸಂಸ್ಥೆ ಅಧ್ಯಕ್ಷ ಡಾ.ಕೆ.ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳು ಸಾಧನೆ ಮಾಡಿದರೆ ಓದುತ್ತಿರುವ ಶಾಲೆಗಷ್ಟೇ ಅಲ್ಲದೆ ಹುಟ್ಟಿದ ಊರಿಗೂ ಹಾಗೂ ಹೆತ್ತವರಿಗೂ ಕೀರ್ತಿ ಸಿಗಲಿದೆ ಎಂದರು.

ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಪತ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತಿಮುಖ್ಯ. ಅಲ್ಲದೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಉತ್ತಮ ವೇದಿಕೆ ಕಲ್ಪಿಸುವುದು ಶಾಲೆ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಸ್ಪರ್ಧೆ ಯಾವುದೇ ಇರಲಿ ಸೋಲು-ಗೆಲುವು ಇದ್ದೇ ಇರುತ್ತದೆ. ಸೋಲು ಹಾಗೂ ಗೆಲುವು ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಗೆಲುವಿನಿಂದ ಬಹುಮಾನ ಸಿಕ್ಕರೆ ಸೋಲು ನೂರಾರು ಅನುಭವಗಳನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ 5 ಸಾವಿರ ರೂ. ನಗದು, ಟ್ರೋಫಿ ಹಾಗೂ ಪ್ರಶಸ್ತಿ ಪತ್ರ ಪಡೆದು ಶಾಲೆಗೆ ಒಳ್ಳೆಯ ಹೆಸರು ಹಾಗೂ ಕೀರ್ತಿ ತಂದಿರುವ ವಿದ್ಯಾರ್ಥಿ ರೋಹನ್ ಅವರ ಸಾಧನೆ ಹಾಗೂ ಪರಿಶ್ರಮವು ಮುಂದಿನ ಭವಿಷ್ಯಕ್ಕೆ ಮೆಟ್ಟಿಲು ಆಗಲಿದೆ ಎಂದು ಶ್ಲಾಘಿಸಿದರು.

ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ. ಭಾರತಿ ನಾಗೇಶ್, ಡೀನ್ ಡಾ. ಸುಜಾ ಫಿಲಿಪ್, ಆಡಳಿತಾಧಿಕಾರಿ ಸಿ.ಪಿ.ಫಿಲಿಪ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net