ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗಳಿಗೆ ಶಿಕ್ಷೆ ಪ್ರಕಟ

ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ
ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗೆ ಶಿಕ್ಷೆ ಪ್ರಕಟ
Published on

ಪ್ರಮುಖ ಮುಖ್ಯಾಂಶಗಳು

  • ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗಳಿಗೆ ಶಿಕ್ಷೆ ಪ್ರಕಟ
  • ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದ ಘಟನೆ
  • ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
ಬಾಲಕಿಗೆ ಕಿರುಕುಳ ನೀಡಿದ್ದ ಅಪರಾಧಿಗಳಿಗೆ
3 ವರ್ಷ ಕಾರಾಗೃಹ ಶಿಕ್ಷೆ
ಬೆಳಗಾವಿ:ಅಪ್ರಾಪ್ತೆಗೆ ಲೈಂಗಿಕ
ಕಿರುಕುಳ ನೀಡಿದ್ದ ಖಾನಾಪೂರ ತಾಲೂಕಿನ ಭೂರಣಕಿ ಗ್ರಾಮದ ನಿವಾಸಿ ಮೊಶೀನ್ ಸಾಹುಕಾರ(೩೦)ಮತ್ತು ಇರ್ಫಾನ್ ವಸ್ತಾದ (೨೪) ಅಪರಾಧಿಗಳಿಗೆ ತಲಾ ೩ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.
ಅಪರಾಧಿಗಳು ೨೦೨೪ರಲ್ಲಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿವಂತೆ, ಕಿರುಕುಳ ನೀಡುವುದರ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಜಿಲ್ಲಾ ನ್ಯಾಯಾಲಯ ದೋಷಾರೋಪಣೆ ಪಟ್ಟಿ ಸಲ್ಲಿಸಿದರು.
ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಈ ತೀರ್ಪು ನೀಡಿದ್ದಾರೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ನೀಡುವಂತೆ ಆದೇಶ ಮಾಡಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲೈ.ವಿ.ಪಾಟೀಲ್ ವಾದ ಮಂಡಿಸಿದರು. .
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net