

ಪ್ರಮುಖ ಮುಖ್ಯಾಂಶಗಳು
ಬಾಲಕಿ ಮೇಲೆ ಅಪರಾಧವೆಸಗಿದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ
ಬೆಳಗಾವಿ:ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ರಾಮನಗರದ ವಡ್ಡರವಾಡಿಯನಗರ ನಿವಾಸಿ ಕೃಷ್ಣಾ ಮಲೇಶಿ ಗಾಡಿವಡ್ಡರ( ೨೩) ಎಂಬುವ ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತೀರ್ಪು ಪ್ರಕಟಿಸಿದೆ.
ಬಾಲಕಿಯನ್ನು ಅಪರಾಧಿಯು ಒತ್ತಾಯ ಪೂರ್ವಕವಾಗಿ ಅಪಹರಣ ಮಾಡಿ, ಲೈಂಗಿಕ ಅತ್ಯಾಚಾರವೆಸಗಿ, ಜೀವ ಬೆದರಿಕೆಯೊಡ್ಡಿದ್ದರ ಕುರಿತು ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ೨೦೨೪ರಲ್ಲಿ ದೂರು ದಾಖಲಾಗಿತ್ತು.ದೂರು ದಾಖಲಿಸಿಕೊಂಡ ತನಿಖಾಕಾರಿ ಮಹಾಂತೇಶ ದ್ಯಾಮಣ್ಣವರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ನೀಡಿದ..ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ಧನ ನೀಡುವಂತೆ ಸೂಚಿಸಲಾಗಿದೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ವಾದ ಮಂಡಿಸಿದ್ದರು.