ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ crops

ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ crops
ಬೆಳೆಗೆ ಉತ್ತಮ ಬೆಲೆ ಸಿಗುತ್ತಿಲ್ಲ crops
Published on
ಮುಳಬಾಗಿಲು: ರೈತರು ಬೆವರು ಸುರಿಸಿದ್ದಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಟೊಮ್ಯಾಟೊ ಸೇರಿ ಇತರ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ದರ ಸಿಗದೆ ಕೃಷಿಕರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಮಂಡಿ ಮಾಲೀಕರು ಶ್ರೀಮಂತರಾಗುತ್ತಿದ್ದಾರೆ. ಆದ್ದರಿಂದ ರೈತರನ್ನು ಜಾಗೃತಿಗೊಳಿಸುವ ಕಾರ್ಯಕ್ರಮ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನವಾದಿ ಮಹಿಳಾ ಸಂಘದ ರಾಜ್ಯ ಸಮಿತಿ ಸದಸ್ಯೆ ವಿ.ಗೀತಾ ಹೇಳಿದರು. crops
ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರ್ನಾಟಕ ಪ್ರಾಂತ ರೈತ ಸಂಘ 18ನೇ ಸಮ್ಮೇಳನದ ಸಿದ್ಧತೆಗಳ ಬಗ್ಗೆ ಆಯೋಜಿಸಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ರೈತರು ಮಾರುಕಟ್ಟೆಗೆ ತರುವ ಟೊಮ್ಯಾಟೊ ಮತ್ತು ತರಕಾರಿಗಳನ್ನು ಹರಾಜು ಕೂಗುವ ವ್ಯಕ್ತಿಗಳ ಕೈಯಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ಇರುತ್ತದೆ. ಆದರೆ ರೈತ ತಮ್ಮ ಮನೆಯ ಮಹಿಳೆಯರ ಚಿನ್ನಾಭರಣ ಗಿರವಿ ಇಟ್ಟು ಬಿಡಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾನೆ ಎಂದರು.
ಸಿಪಿಐ (ಎಂ) ಮುಖಂಡ ಸಿದ್ಧನಹಳ್ಳಿ ಶೇಖರ್​ ಮಾತನಾಡಿ, ನಗರದ ಕೆಇಬಿ ಸಮುದಾಯ ಭವನದಲ್ಲಿ ಮಾ.9ರಿಂದ 11ರವರಿಗೆ 3 ದಿನ ಕರ್ನಾಟಕ ಪ್ರಾಂತ ರೈತ ಸಂಘದ 18ನೇ ರಾಜ್ಯ ಸಮ್ಮೇಳನ ನಡೆಯಲಿದ್ದು, ಮಾ.8ರಂದು ಗಾಂಧಿ ವನದಿಂದ ಕೋಲಾರದ ಹಳೇ ಬಸ್​ ನಿಲ್ದಾಣವರಿಗೂ ಮೆರವಣಿಗೆ ಮೂಲಕ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net