

ಪ್ರಮುಖ ಮುಖ್ಯಾಂಶಗಳು
ಹೊಸದಾಗಿ ಎರಡು ವಸತಿನಿಲಯ ಸ್ಥಾಪಿಸಿದ್ದು, ವಿದ್ಯಾರ್ಥಿಗಳ ಉನ್ನತ ಶಿಣಕ್ಕೆ ಬೇಕಾದ ಎಲ್ಲ ಪೂರಕ ವಾತಾವರಣ ನಿರ್ಮಿಸಲಾಗಿದೆ. ಜಮ್ಮು ಕಾಶ್ಮೀರ, ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಸಹ ಅಧ್ಯಯನ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣಕ್ಕೆ ಪ್ರಾಧಾನ್ಯ ನೀಡಲಾಗಿದೆ.
ಘಟಿಕೋತ್ಸವ ಯಶಸ್ಸಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಪರಾಷ್ಟ್ರಪತಿ ಭಾಗವಹಿಸುತ್ತಿರುವುದರಿಂದ ಶಿಷ್ಟಾಚಾರದಂತೆ ಕಾರ್ಯಕ್ರಮ ನಡೆಯಲಿದೆ. ನಮ್ಮ ವಿಶ್ವವಿದ್ಯಾಲಯ ಗುಣಮಟ್ಟದ ಶಿಕ್ಷಣ, ಮೂಲಸೌಲಭ್ಯ, ಪ್ರಯೋಗಾಲಯ, ಹೊಸ ಹೊಸ ಕೋರ್ಸ್ ಸೇರಿ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸಿ ದೇಶದ ಮುಂಚೂಣಿ ವಿವಿಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿಯತ್ತ ಹೆಜ್ಜೆ ಹಾಕಲು ಯೋಜನೆ ರೂಪಿಸಲಾಗುತ್ತಿದೆ.