₹5.04 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ ಕಸ್ಟಮ್ಸ್

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on

ಪ್ರಮುಖ ಮುಖ್ಯಾಂಶಗಳು

  • ಬ್ಯಾಂಕಾಕ್, ವಿಯೆಟ್ನಾ ದೇಶದ ನಾಲ್ವರು ಪೆಡ್ಲರ್ ಬಂಧನ
  • ಬಂಧಿತರಿಂದ 14.4 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ವಶ

ಬೆಂಗಳೂರು:

ವಿದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಡ್ರಗ್ಸ್ ಸಾಗಿಸುತ್ತಿದ್ದ 3 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.04 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರಿನ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ವಿಯೆಟ್ನಾಂ ಹಾಗೂ ಬ್ಯಾಂಕಾಕ್‌ನ ನಾಲ್ವರು ಪೆಡ್ಲರ್‌ಗಳಿಂದ ಬರೊಬ್ಬರಿ 14.4 ಕೆ.ಜಿ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದು ಅವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಪೆಡ್ಲರ್‌ಗಳು, ತಮ್ಮ ಬ್ಯಾಗ್‌ನಲ್ಲಿ ರಹಸ್ಯವಾಗಿ ಡ್ರಗ್ಸ್ ಅನ್ನು ಅಡಗಿಸಿಕೊಂಡು ವಿಮಾನ ಏರಿದ್ದರು. ವಿವಿಧ ದಿನಾಂಕಗಳಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಇಲ್ಲಿನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕೊಂಡಿದ್ದಾರೆ.
ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನೊಬ್ಬನ ಬಳಿ 2.85 ಕೋಟಿ ರೂ. ಮೌಲ್ಯದ 8.13 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಜಪ್ತಿ ಮಾಡಿದ್ದರು.
ಎರಡನೇ ಪ್ರಕರಣದಲ್ಲಿ ವಿಯೆಟ್ನಾಂನಿಂದ ಬಂದ ಪ್ರಯಾಣಿಕನ ಬಳಿ 1.49 ಕೋಟಿ ರೂ. ಮೌಲ್ಯದ 4.27 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.
ಮೂರನೇ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದಲೇ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಬಳಿ 70 ಲಕ್ಷ ರೂ. ಮೌಲ್ಯದ 2 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.
ವಿದೇಶಗಳಿಂದ ಬೆಂಗಳೂರಿಗೆ ನಿರಂತರವಾಗಿ ಗಾಂಜಾ ಹರಿದುಬರುತ್ತಿರುವ ಮಾದಕ ವಸ್ತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅಧಿಕಾರಿಗಳು, ಈ ಜಾಲದ ಹಿಂದೆ ಇರುವ ಸ್ಥಳೀಯ ಹಾಗೂ ವಿದೇಶಿ ಲಿಂಕ್‌ಗಳ ಬಗ್ಗೆ ತೀವ್ರ ವಿಚಾರಣೆ ಮುಂದುವರಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net