ಸಿಲಿಂಡರ್ ದರ ಏರಿಕೆ ಸರಿಯಲ್ಲ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ! | Cylinder Price

CM Siddaramaiah
CM Siddaramaiah
Published on
ಬೆಂಗಳೂರು: ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ ಜಿ(Cylinder Price) ಸಿಲಿಂಡರ್ ಗೆ 115ರೂ. ಗಳನ್ನು ಹಾಗೂ ಮನೆ ಬಳಕೆಯ ಸಿಲಿಂಡರ್ ಗೆ 60 ರೂ ಹೆಚ್ಚಳ ಮಾಡಿದೆ. ಇದು ಬಹಳ ಹೆಚ್ಚಾಗಿದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಲಿಂಡರ್ ಸರಬರಾಜಿನ ಕುರಿತು ಆತಂಕವಿರುವುದು ಬೇರೆ ವಿಷಯ ಆದರೆ ಎಲ್ ಪಿ ಜಿ ದರ ಹೆಚ್ಚಳವಾಗಿದೆ ಎನ್ನುವುದು ಬೇರೆ ವಿಷಯ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ ಸಂಸದರು LPG ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಸಿಎಂ ಡಿಕೆಶಿ

ಬೆಂಗಳೂರು:ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರುಗಳು ಈ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, "ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಸಂಸತ್ ಅಧಿವೇಶನದಲ್ಲಿ ಈ ವಿಚಾರವನ್ನ ಕೇಂದ್ರ ಸರ್ಕಾರ ಚರ್ಚೆ ಮಾಡಬೇಕು. ಈ ವಿಚಾರ ಚರ್ಚೆ ನಡೆಸಲು ಇವತ್ತಿನ ತನಕ ಅವಕಾಶ ನೀಡುತ್ತಿಲ್ಲ. ಆದ ಕಾರಣಕ್ಕೆ ಇಂಡಿಯಾ ಒಕ್ಕೂಟದ ಪ್ರತಿನಿಧಿಗಳು ಪ್ರತಿಭಟನೆ ಮಾಡುತ್ತಿದ್ದಾರೆ" ಎಂದರು.
"ಹೋಟೆಲ್ ಹಾಗೂ ಇತರೇ ಉದ್ದಿಮೆಗಳು ಇದರಿಂದ ತೊಂದರೆಗೆ ಒಳಗಾಗಿವೆ. ಇದರ ಬಗ್ಗೆ ನಾವು ದನಿ ಎತ್ತಬೇಕಿರುವುದು ನಮ್ಮ ಕರ್ತವ್ಯ. ಕೋಟ್ಯಂತರ ಮಹಿಳೆಯರ ಮೇಲೆ ಇದು ಪರಿಣಾಮ ಬೀರಿದೆ. ಯುದ್ದದ ಪರಿಣಾಮವಾಗಿ ಸೌದಿ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಭಾರತೀಯ ಉದ್ಯಮಿಗಳು, ಕೆಲಸಗಾರರ ಮೇಲೆ ಪರಿಣಾಮ ಬೀರಿದೆ" ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net