ಆದರೆ, ಕಾಂಗ್ರೆಸ್ ಅವಧಿಯಲ್ಲಿ ಹಾಗಾಗಲಿಲ್ಲ. ಸಿದ್ದರಾಮಯ್ಯ ಅವರು ಈ ಹಿಂದೆ ಐದು ವರ್ಷ ಪೂರ್ಣಾವಧಿ ಆಡಳಿತ ನಡೆಸಿದ್ದು, ಇದೀಗ ಎರಡನೇ ಅವಧಿಯಲ್ಲಿ ಅರಸು ಅವರ ದಾಖಲೆ ಹಿಂದಿಕ್ಕಿದ್ದಾರೆ. ಸಿದ್ದರಾಮಯ್ಯ ಅವರು ಸೈದ್ದಾಂತಿಕ ಹೋರಾಟ ನಡೆಸಿಕೊಂಡು ಬಂದವರು. ವಿಶೇಷವಾಗಿ ಅನ್ನಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ ಸೇರಿದಂತೆ ಇದೀಗ ಗ್ಯಾರಂಟಿ ಯೋಜನೆ ಜಾರಿ ಮೂಲಕ ಜನರ ಮನ ಗೆದ್ದಿದ್ದಾರೆ. ಹೀಗಾಗಿ ಅರಸು ಅವರಾಗಲಿ ಸಿದ್ದರಾಮಯ್ಯ ಅವರಾಗಲಿ ಇಬ್ಬರೂ ಶ್ರೇಷ್ಠ ನಾಯಕರು ಎಂದರು.