ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಶುಭಕೋರಿದ್ದು, ಅನಂತ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರು ಹಾಗೂ ಸಹಜ ಅಭಿನಯ, ಅಭಿವ್ಯಕ್ತಿಗೆ ಮತ್ತೊಂದು ಹೆಸರು. ಭಾರತೀಯ ಚಿತ್ರರಂಗದಲ್ಲಿ ಅಪರೂಪದ ಪ್ರತಿಭೆಯಾಗಿರುವ ಅವರಿಗೆ ಈ ದಾದಾಸಾಹೇಬ್ ಫಾಲ್ಕೆ ಗೌರವ ಸಂದಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ವರನಟ ಡಾ. ರಾಜ್‌ಕುಮಾರ್ ಅವರ ನಂತರ ಕನ್ನಡ ಭುವನೇಶ್ವರಿಯ ಕೀರ್ತಿ ಕಿರೀಟಕ್ಕೆ ಮತ್ತೊಂದು ಗರಿ ಮುಡಿಸಿದ ಹೆಗ್ಗಳಿಕೆ ಅವರದ್ದಾಗಿದೆ.