ಐದು ಹಂತಗಳಲ್ಲಿ ಸಿಲಿಂಡರ್ ಸರಬರಾಜು ಮಾಡುವಂತೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಂಸ್ಥೆ, ವಿದ್ಯಾರ್ಥಿನಿಲಯ ಮತ್ತು ಆಸ್ಪತ್ರೆಗಳಿಗೆ ಪ್ರತಿನಿತ್ಯ 4,200, ಇಂದಿರಾ ಕ್ಯಾಂಟೀನ್, ರೈಲ್ವೆ, ಬಸ್ ನಿಲ್ದಾಣಗಳು, ನಂದಿನಿ, ಸರ್ಕಾರಿ ಸಂಸ್ಥೆಗಳಿಗೆ 1,200 ಮತ್ತು ರೆಸ್ಟೋರೆಂಟ್, ಡಾಬಾ, ಹೋಟೆಲ್ಗಳಿಗೆ 1000 ಸಿಲಿಂಡರ್ ಪೂರೈಕೆ ಮಾಡಲಾಗುವುದು. ಕೃಷಿ ಫಾರ್ಮಾ, ಮೀನುಗಾರಿಕೆ, ಕೋಳಿ ಸಾಕಾಣಿಕೆ ಮತ್ತು ಕಾರ್ಪೋರೇಟ್ ಕ್ಯಾಂಟೀನ್‌ಗೆ 500, ಇತರ ವರ್ಗಕ್ಕೆ 100 ಸಿಲಿಂಡರ್ ಪೂರೈಕೆಗೆ ಸರ್ಕಾರ ತೀರ್ಮಾನಿಸಿದೆ. ಪ್ರತಿದಿನಕ್ಕೆ 44 ಸಾವಿರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೇಕಿತ್ತು. ಆದರೆ 9,544 ಸಿಲಿಂಡರ್ ನೀಡಲಾಗುತ್ತದೆ.