ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
sutturu swamiji
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಗುರು-ಶಿಷ್ಯ ಪರಂಪರೆಯೇ ಭಾರತೀಯ ಶಾಸ್ತ್ರೀಯ ಕಲೆಯ ಜೀವಾಳವಾಗಿದೆ.
ವಿದುಷಿ ಅನುಶ್ರುತಾ ಹಾಗೂ ಖ್ಯಾತ ನೃತ್ಯಗಾರ್ತಿ ಡಾ. ವಸುಂಧರಾ ದೊರೆಸ್ವಾಮಿ ಉಪಸ್ಥಿತರಿದ್ದರು.
ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ:
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
ಬೆಂಗಳೂರು:
ಭರತನಾಟ್ಯವು ಕೇವಲ ಮನರಂಜನೆಯ ಕಲೆಯಲ್ಲ, ಅದು ಭಾರತೀಯ ಸಂಸ್ಕೃತಿ, ಭಕ್ತಿ, ಶಿಸ್ತು ಮತ್ತು ಆತ್ಮಸಾಧನೆಯ ಜೀವಂತ ಅಭಿವ್ಯಕ್ತಿಯಾಗಿದೆ ಎಂದು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.
ಸಂಜಯನಗರದ ರಮಣ ಮಹರ್ಷಿ ಹೆರಿಟೇಜ್ ಆಡಿಟೋರಿಯಂನಲ್ಲಿ ವಿದುಷಿ ಅನುಶ್ರುತಾ ಬಿ.ವೈ. ಅವರ ‘ದಶಬ್ದಿ’ ಭರತನಾಟ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗುರು-ಶಿಷ್ಯ ಪರಂಪರೆಯೇ ಭಾರತೀಯ ಶಾಸ್ತ್ರೀಯ ಕಲೆಯ ಜೀವಾಳವಾಗಿದೆ. ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳು ಕೇವಲ ಉತ್ತಮ ಕಲಾವಿದರಾಗುವುದಲ್ಲ, ಉತ್ತಮ ವ್ಯಕ್ತಿತ್ವವನ್ನೂ ರೂಪಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಯುವಜನರು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯಿಂದ ದೂರವಾಗುತ್ತಿರುವ ಸಂದರ್ಭದಲ್ಲಿ, ಭರತನಾಟ್ಯದಂತಹ ಶಾಸ್ತ್ರೀಯ ಕಲೆಗಳು ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸೇತುವೆಯಾಗಿವೆ ಎಂದು ಹೇಳಿದರು. ಕಲೆಯ ಮೂಲಕ ಭಕ್ತಿ, ಶಿಸ್ತು, ಸಹನೆ ಮತ್ತು ಸಮರ್ಪಣೆಯಂತಹ ಜೀವನ ಮೌಲ್ಯಗಳು ಬೆಳೆಸಲ್ಪಡುತ್ತವೆ ಎಂದು ಅಭಿಪ್ರಾಯಪಟ್ಟರು.
ವಿದುಷಿ ಅನುಶ್ರುತಾ ಬಿ.ವೈ. ಅವರು ಕಳೆದ ಹತ್ತು ವರ್ಷಗಳಿಂದ ಭರತನಾಟ್ಯವನ್ನು ಬೋಧಿಸುವ ಮೂಲಕ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಿರುವುದು ಶ್ಲಾಘನೀಯ. ಕಲಾವಿದರ ಸಾಧನೆಗೆ ನಿರಂತರ ಪರಿಶ್ರಮ, ಗುರುಭಕ್ತಿ ಮತ್ತು ಕಲೆಯ ಮೇಲಿನ ನಿಷ್ಠೆ ಅಗತ್ಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸ್ವಾಮೀಜಿ, ಭಾರತೀಯ ಶಾಸ್ತ್ರೀಯ ಕಲೆಗಳನ್ನು ಸಂರಕ್ಷಿಸಿ ಬೆಳೆಸುವ ಕಾರ್ಯದಲ್ಲಿ ಪೋಷಕರು ಹಾಗೂ ಸಮಾಜವೂ ಕೈಜೋಡಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ವಿದುಷಿ ಅನುಶ್ರುತಾ ಹಾಗೂ ಖ್ಯಾತ ನೃತ್ಯಗಾರ್ತಿ ಡಾ. ವಸುಂಧರಾ ದೊರೆಸ್ವಾಮಿ, ಸಂಗೀತ ಮೇಳದಲ್ಲಿ ಗಾನಶ್ರೀ ಗುರುಪ್ರಸಾದ್, ಡಾ.ಹನುಮಂತರಾಜು, ಸಮೃದ್ಧ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಡಾ.ಲಕ್ಷ್ಮಿ ರೇಖಾ ಅರುಣ್ ನಿರೂಪಿಸಿದರು.
* ಗುರು-ಶಿಷ್ಯ ಪರಂಪರೆಯೇ ಭಾರತೀಯ ಶಾಸ್ತ್ರೀಯ ಕಲೆಯ ಜೀವಾಳವಾಗಿದೆ. ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳು ಕೇವಲ ಉತ್ತಮ ಕಲಾವಿದರಾಗುವುದಲ್ಲ, ಉತ್ತಮ ವ್ಯಕ್ತಿತ್ವವನ್ನೂ ರೂಪಿಸಿಕೊಳ್ಳುತ್ತಾರೆ