ಚಿತ್ತಾಪುರ ತಾಲೂಕಿನ ದಂಡಗುಂಡದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಮಾತನಾಡಿದರು. ಭೀಮಣ್ಣ ಸಾಲಿ, ಚಂದ್ರಶೇಖರ ಅವಂಟಿ, ಮಹಾಂತಗೌಡ ಪಾಟೀಲ್, ರಾಜಶೇಖರಗೌಡ ಪಾಟೀಲ್, ಮಹಾಂತಗೌಡ ಪಾಟೀಲ್, ಶಂಕರಗೌಡ ಪಾಟೀಲ್, ಎಸ್.ಸಿ.ಪಾಟೀಲ್, ಮಂಜುನಾಥರೆಡ್ಡಿ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಡಾ.ಬಿ.ಜಿ.ಪಾಟೀಲ್ ಹೇಳಿಕೆ
ಯಾತ್ರಿ ನಿವಾಸದಲ್ಲಿ ಪೂರ್ವಭಾವಿ ಸಭೆ
ಚಿತ್ತಾಪುರ: ದಂಡಗುಂಡದಲ್ಲಿ ಶ್ರೀ ಬಸವಣ್ಣ ಜಾತ್ರೆ ನಿಮಿತ್ತ ಆ.31ರಂದು ಅದ್ದೂರಿಯಾಗಿ ಮಹಾರಥೋತ್ಸವ ನಡೆಯಲಿದೆ. ಇದಕ್ಕಾಗಿ ಈಗಾಗಲೇ ದೇವಸ್ಥಾನ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶ್ರೀ ದಂಡಗುಂಡ ಬಸವಣ್ಣ ದೇವಸ್ಥಾನ ಟ್ರಸ್ಟ್ ಉಪಾಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್ ಹೇಳಿದರು.
ದಂಡಗುಂಡ ಬಸವಣ್ಣ ದೇವಸ್ಥಾನದ ಯಾತ್ರಿ ನಿವಾಸದಲ್ಲಿ ಜಾತ್ರಾ ಮಹೋತ್ಸವ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಶ್ರಾವಣದ ನಡುವಿನ ಸೋಮವಾರದಂದು ಬಸವಣ್ಣನ ಜಾತ್ರೆ ಜರುಗಲಿದೆ. ಜಾತ್ರೆಗೆ ಆಗಮಿಸುವ ಜನರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಬೇಕು. ವಿದ್ಯುತ್ ಸಂಪರ್ಕದ ಸಮಸ್ಯೆ ಆಗದಿರಲಿ. ಮಹಾರಥಕ್ಕೆ ವೈಭವದ ಅಲಂಕಾರ ಮಾಡಬೇಕು. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ದಾಸೋಹ ವ್ಯವಸ್ಥೆ ಶುಚಿ, ರುಚಿಯಾಗಿರಬೇಕು. ಸುಗಮ ಉತ್ಸವಕ್ಕೆ ಭಕ್ತರ ಸಹಕಾರವೂ ಅಗತ್ಯವಾಗಿದೆ ಎಂದರು.
ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಅವಂಟಿ ಮಾತನಾಡಿ, ಕಳೆದ ಅಮಾವ್ಯಾಸೆಯಂದು ದೇವಸ್ಥಾನದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ದರ್ಶನ ಪಡೆದಿದ್ದಾರೆ. ಹೀಗಾಗಿ ಜಾತ್ರೆಗೆ ಸುಮಾರು 2 ಲಕ್ಷಕ್ಕೂ ಹೆಚ್ಚಿನ ಭಕ್ತರು ಬರುವ ನಿರೀಕ್ಷೆಯಿದೆ. ಯಾವುದೇ ಸಮಸ್ಯೆ ಆಗದಂತೆ ಅಚ್ಚುಕಟ್ಟಾಗಿ ಉತ್ಸವ ನಡೆಯಬೇಕು. ಸುಗಮ ಜಾತ್ರೆಗೆ ಸೂಕ್ತ ಬಂದೋಬಸ್ತ್ ಅಗತ್ಯವಿದೆ ಎಂದು ಹೇಳಿದರು.
ಡಿವೈಎಸ್ಪಿ ಶಂಕರಗೌಡ ಪಾಟೀಲ್ ಮಾತನಾಡಿ, ಈ ಭಾಗದ ಪ್ರಮುಖ ಜಾತ್ರೆ ಇದಾಗಿದ್ದು, ಅಸಂಖ್ಯ ಭಕ್ತರು ಪಾಲ್ಗೊಳ್ಳಲಿದ್ದಾರೆ. ಮುಖ್ಯವಾಗಿ ಟ್ರಾಫಿಕ್ ಹಾಗೂ ಪಾರ್ಕಿಂಗ್ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು. ದೇವಸ್ಥಾನಕ್ಕೆ ಬರುವ ರಸ್ತೆ ಅಕ್ಕ &ಪಕ್ಕದಲ್ಲಿ ಯಾವ ವಾಹನಗಳು ನಿಲ್ಲಿಸಬಾರದು. ಗುರುತಿಸಿರುವ ಸ್ಥಳದಲ್ಲೇ ಪಾರ್ಕಿಂಗ್ ಮಾಡಬೇಕು ಎಂದು ತಿಳಿಸಿದರು.
ಅಳ್ಳೊಳ್ಳಿ ಮಾರ್ಗದಿಂದ ದೇವಸ್ಥಾನಕ್ಕೆ ಬರುವ ವಾಹನಗಳಿಗೆ ಬಲಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಹಾಗೂ ಯಾಗಾಪುರ ಭಾಗದಿಂದ ಬರುವ ವಾಹನಗಳಿ ಇನ್ನೊಂದ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಬಳಿಯ ಮೈದಾನದವರೆಗೆ ಬರಲು ಮಾತ್ರ ಬಸ್ಗಳಿಗೆ ಅವಕಾಶ ಕಲ್ಪಿಸಲಾಗುವುದು. ದೇವರ ದರ್ಶನಕ್ಕಾಗಿ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸರದಿ ಸಾಲು ವ್ಯವಸ್ಥೆ ಮಾಡಲಾಗುವುದು. ಪ್ರದಣೆಗೆ ಅವಕಾಶವಿಲ್ಲ. ಯಾವುದೇ ಅಹಿತಕರ ಟನೆಗೆ ಅವಕಾಶ ನೀಡದೆ ಯಶಸ್ವಿಯಾಗಿ ಜಾತ್ರೆ ನಡೆಸೋಣ ಎಂದರು.
ಟ್ರಸ್ಟ್ ಹಿರಿಯ ಸದಸ್ಯ ಭೀಮಣ್ಣ ಸಾಲಿ ಮಾತನಾಡಿ, ಜಾತ್ರೆಗೆ ವಿವಿಧ ಮಠಾಧೀಶರನ್ನು ಅಹ್ವಾನಿಸಿ ದೇವಸ್ಥಾನದ ಕಳಶಾರೋಹಣ ನೆರವೇರಿಸಲಾಗುವುದು. ಇಲ್ಲಿ ಹಿಂದಿನಿಂದಲೂ ಶಾಂತಿಯುತವಾಗಿ ಜಾತ್ರೆ ನಡೆಯುತ್ತಿದೆ. ಗಂವ್ಹಾರದ ಭಕ್ತರು ದಾಸೋಹದಲ್ಲಿ ಸೇವೆ ಸಲ್ಲಿಸುತ್ತಾರೆ ಎಂದು ಮಾಹಿತಿ ನೀಡಿದರು.