ಅಂದಹಾಗೆ, ಇಲ್ಲಿ ಸುದೀಪ್ ಅವರು ಯಾರ ಹೆಸರನ್ನು ಸಹ ಉಲ್ಲೇಖಿಸಲಿಲ್ಲ. ಆದರೆ, ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಸುದೀಪ್ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಸುದೀಪ್ ಅವರು ನಮ್ಮನ್ನು ಉದ್ದೇಶಿಸಿ ಈ ಮಾತನ್ನು ಹೇಳಿದ್ದಾರೆ ಎಂದು ಭಾವಿಸಿರುವ ದರ್ಶನ್ ಅಭಿಮಾನಿಗಳು ಸುದೀಪ್ ವಿರುದ್ಧ ಹರಿಹಾಯ್ದಿದ್ದಾರೆ. ಸುದೀಪ್ ಅವರ ತೇಜೋವಧೆ ಮಾಡುತ್ತಿದ್ದು, ಇನ್ನೂ ಬಿಡುಗಡೆಯಾಗದ ಮಾರ್ಕ್ ಸಿನಿಮಾದ ಬಗ್ಗೆ ನೆಗೆಟಿವ್ ಹರಡುತ್ತಿದ್ದಾರೆ. ಹಳೆಯ ವಿಚಾರಗಳನ್ನು ಕೆದುಕುತ್ತಾ ಸುದೀಪ್ ಅವರ ಇಮೇಜ್ಗೆ ಧಕ್ಕೆ ತರುವ ಕೆಲಸಕ್ಕೆ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಕೆಲವರು ಇಳಿದಿದ್ದಾರೆ. ಇದರಿಂದ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸ್ಟಾರ್ ವಾರ್ ಶುರುವಾಗಿದೆ.