ಜಿಲ್ಲಾಮಟ್ಟದಲ್ಲಿ ಹಾಗೂ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಪವಾಡ ರಹಸ್ಯ ಬಯಲು ಕಾರ್ಯಕ್ರಮಗಳ ಸಂಘಟನೆ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ವಿಜ್ಞಾನ ಉಪನ್ಯಾಸ ಸ್ಪರ್ಧೆ, ವಿಜ್ಞಾನ ಗೋಷ್ಠಿ, ವಿಜ್ಞಾನ ರಸಪ್ರಶ್ನೆ, ವಿಜ್ಞಾನ ವಸ್ತು ಪ್ರದರ್ಶನ, ವಿದ್ಯಾರ್ಥಿ-ವಿಜ್ಞಾನಿ ನೇರ ಸಂವಾದ ಗೋಷ್ಠಿ ಸೇರಿದಂತೆ ವಿಜ್ಞಾನ ಸಂವಹನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಾ ಬಂದಿದ್ದಾರೆ.