ಎಸ್ಸೆಸ್ಸೆಲ್ಸಿ ಟಾಪರ್ಸ್​ಗಳಿಗೆ ಡಿಸಿ ಸತ್ಕಾರ

ಎಸ್ಸೆಸ್ಸೆಲ್ಸಿಯಲ್ಲಿ ಕಲಬುರಗಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಶುಕ್ರವಾರ ತಮ್ಮ ಕಚೇರಿಯಲ್ಲಿ ಸತ್ಕರಿಸಿದರು. ಡಿಡಿಪಿಐ ಶಂಕ್ರಮ್ಮ ಢವಳಗಿ ಇತರರಿದ್ದರು.
ಎಸ್ಸೆಸ್ಸೆಲ್ಸಿಯಲ್ಲಿ ಕಲಬುರಗಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಶುಕ್ರವಾರ ತಮ್ಮ ಕಚೇರಿಯಲ್ಲಿ ಸತ್ಕರಿಸಿದರು. ಡಿಡಿಪಿಐ ಶಂಕ್ರಮ್ಮ ಢವಳಗಿ ಇತರರಿದ್ದರು.
Published on
ಕಲಬುರಗಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚಿನ ಅಂಕ ಪಡೆದ ಆರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್​ ಶುಕ್ರವಾರ ತಮ್ಮ ಕಚೇರಿಯಲ್ಲಿ ಸತ್ಕರಿಸಿ, ಪ್ರೋತ್ಸಾಹಿಸಿದರು.
625ರ ಪೈಕಿ 623 ಅಂಕ ಪಡೆದು ಶೇ.99.68 ಅಂಕದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಕಲಬುರಗಿ ದಣ ವಲಯದ ಸಾವಳಗಿಯ ಅಜೀಮ್​ ಪ್ರೇಮ್​ಜಿ ಶಾಲೆಯ ವಿದ್ಯಾರ್ಥಿ ಗಣೇಶ, ತಲಾ 622 ಅಂಕ ಪಡೆದು ಎರಡನೇ ಸ್ಥಾನ ಹಂಚಿಕೊಂಡಿರುವ ಕಲಬುರಗಿ ಶರಣಬಸವೇಶ್ವರ ವಸತಿ ಶಾಲೆಯ ವಿದ್ಯಾರ್ಥಿನಿಯರಾ ಮಾಧವಿ, ಮೇನಾ ಮತ್ತು 620 ಅಂಕ ಪಡೆದು ತೃತೀಯ ಸ್ಥಾನ ಪಡೆದಿರುವ ಕಲಬುರಗಿಯ ಜಗತ್​ ಪ್ರದೇಶದ ಎಸ್​.ಸಿ&ಎಸ್​.ಟಿ ಪ್ರತಿಭಾನಿತ್ವ ಶಾಲೆಯ ಭಾಗ್ಯಶ್ರೀ, ಎಸ್​.ಆರ.ಎನ್​.ಮೆಹತಾ ಶಾಲೆಯ ಓಂಕಾರ ಹಾಸು ಹಾಗೂ ಜೇವರ್ಗಿ ತಾಲೂಕಿನ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ನಿಸರ್ಗಾ ಅವರನ್ನು ಡಿಸಿ ವಿಶೇಷವಾಗಿ ಸತ್ಕರಿಸಿ ಮೆಚ್ಚುಗೆಯ ಮಾತುಗಳನ್ನಾಡಿದರು.
ಡಿಡಿಪಿಐ ಶಂಕ್ರಮ್ಮ ಢವಳಗಿ, ವಿದ್ಯಾರ್ಥಿಗಳು, ಪಾಲಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net