ಕೋಡ್ಲಿಯಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಣೆಗೆ ಡಿಸಿ ಇಕ್ರಮ್ ಶರೀಫ್ ಚಾಲನೆ

,
,
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿಗಳಿಂದ ಕಾಳಗಿ-ಚಿಂಚೋಳಿ ತಾಲೂಕುಗಳಲ್ಲಿ ಮಿಂಚಿನ ಸಂಚಾರ
ಕಲಬುರಗಿ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಗುರುವಾರ ಜಿಲ್ಲೆಯ ಕಾಳಗಿ ಮತ್ತು ಚಿಂಚೋಳಿ ತಾಲೂಕು ಪ್ರವಾಸ ಕೈಗೊಂಡಿದ್ದು ತಾಲೂಕಿನ ಅರ್.ಎಸ್.ಕೆ. ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ,‌ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.
ಕಾಳಗಿ ತಾಲೂಕಿನ ಕೋಡ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ‌ ನೀಡಿ ರೈತರಿಗೆ ತೊಗರಿ, ಹತ್ತಿ, ಕಡಲೆ, ಉದ್ದು, ಸೋಯಾಬಿನ್ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೈತರೊಂದಿಗೆ ಸಂವಾದ ನಡೆಸಿದ ಅವರು ಜಿಲ್ಲೆಯಲ್ಲಿ ಬಿತ್ತನೆ ಬೀಜ ರಸಗೊಬ್ಬರದ ಯಾವುದೇ ಕೊರತೆ ಇಲ್ಲ. ರೈತಾಪಿ ವರ್ಗದವರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದಲ್ಲದೆ ಮಳೆ ನೋಡಿಕೊಂಡು ಬಿತ್ತನೆ ಮಾಡುವಂತೆ ಸಲಹೆ ನೀಡಿದರು.
ಇದಲ್ಲದೆ ಕಾಳಗಿ ಸಮುದಾಯ ಆರೊಗ್ಯ ಕೇಂದ್ರಕ್ಕೂ ಭೇಟಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಪ್ರಸ್ತುತ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ, ವೈದ್ಯರ ಕೊರತೆ ಇತ್ಯಾದಿ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇದಕ್ಕು ರೈತ ತರಬೇತಿ ಹಾಗೂ ಕೃಷಿ ಸಂಸ್ಕರಣೆ‌ಸಾಮಾನ್ಯ ಸೌಲಭ್ಯ ಕೇಮದ್ರಕ್ಕೂ ಭೇಟಿ ನೀಡಿ ಕೃಷಿ ಸಂಸ್ಕರಣೆ ಕುರೊತು ಮಾಹಿತಿ ಪಡೆದುಕೊಂಡರು.
ನಂತರ ಡಿ.ಸಿ ಇಕ್ರಮ್ ಶರೀಫ್ ಅವರು, ಸುಲೆಪೇಟ್ ಆರ್.ಎಸ್.ಕೆ, ಚಿಂಚೋಳಿಯ ಚಂದಾಪುರ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿದರು. ಇದಲ್ಲದೆ ತಾಲೂಕಾ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ಯುವ ಸಬಲೀಕಣ ಮತ್ತು ಕ್ರೀಡಾ ಇಲಾಕೆಯ ಸಹಾಯಕ ನಿರ್ದೇಶಕ ಸಂಗಮೇಶ ಅವರಿಂದ ಮಾಹಿತಿ ಪಡೆದುಕೊಂಡರು. ಚಂದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಲಕೀಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ವಿಧ್ಯಾಭ್ಯಾಸ ಮತ್ತು ಅವರ ಕುಂದುಕೊರತೆಗಳನ್ನು ಆಲಿಸಿದರು. ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ರಸಗೊಬ್ಬರ ವಿತರಣೆ ಕುರಿತು ಮಾಹಿತಿ ಪಡೆದುಕೊಂಡರು.
ಸೇಡಂ ಉಪ ವಿಭಾಗದ ಸಹಾಯಕ ಆಯುಕ್ತ ಪ್ರಭುರೆಡ್ಡಿ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಉಪ ಕೃಷಿ ನಿರ್ದೇಶಕಿ ಅನುಸೂಯಾ ಹೂಗಾರ, ಚಿಂಚೋಳಿ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ, ಕಾಳಗಿ ತಹಶೀಲ್ದಾರ ಪೃಥ್ಚಿರಾಜ ಪಾಟೀಲ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net