ಮಂಗಳವಾರ ಸಂಜೆ ದೇಗುಲಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ ಅವರೊಂದಿಗೆ ದೇಗುಲದ ಹೊರಾಂಗಣ, ರಂಗಮಂದಿರ, ಭಕ್ತರು ದೇವರ ದರ್ಶನ ಪಡೆಯಲು ತೆರಳುವ ಮಾರ್ಗದಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಹಾಗೂ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುವಂತೆ ಸೂಚಿಸಿದರು.