ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮೂಹ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ

ಜಿಲ್ಲಾಡಳಿತ ಭವನದಲ್ಲಿ ನಡೆದ ಬಾಲಕಾಮಿರ್ಕ ವಿರೋಧಿ ದಿನಾಚರಣೆಯಲ್ಲಿ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಿ.ಎಸ್​. ಶ್ರಿಧರ, ಸಿ. ಆರ್​. ಮುಂಡರಗಿ, ವಸಂತ ಮಡ್ಲೂರು ಇತರರು ಇದ್ದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಬಾಲಕಾಮಿರ್ಕ ವಿರೋಧಿ ದಿನಾಚರಣೆಯಲ್ಲಿ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಿ.ಎಸ್​. ಶ್ರಿಧರ, ಸಿ. ಆರ್​. ಮುಂಡರಗಿ, ವಸಂತ ಮಡ್ಲೂರು ಇತರರು ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಗದಗ
ಮಕ್ಕಳು ಕಾರ್ಮಿಕರಾಗದಂತೆ ತಡೆಯುವುದು ಪ್ರತಿಯೊಬ್ಬರ ಸಾಮಾಜಿಕ ಜವಾಬ್ದಾರಿ ಆಗಿದೆ. ಶಿಣದಿಂದ ಮಗು ವಂಚಿತ ಆಗದಂತೆ ಎಲ್ಲರೂ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯತೆ ವಹಿಸಿ ಮಾತನಾಡಿದ ಅವರು, ಬಾಲ ಕಾಮಿರ್ಕ ಪದ್ಧತಿ ವಿರೋಧಿ ದಿನವು ಕೇವಲ ಆಚರಣೆಯ ದಿನವಲ್ಲ. ಸಮಾಜವಾಗಿ ನಾವು ಪುನಃ ಎಚ್ಚರಿಸಿಕೊಳ್ಳಬೇಕಾದ ಸಂದರ್ಭ ಎಂದು ಹೇಳಿದರು.
ಮಕ್ಕಳು ಓದುವ ವಯಸ್ಸಿನಲ್ಲಿ ದಿಕ್ಕು ತಪ್ಪಿದರೆ ಅದರ ದುಷ್ಪರಿಣಾಮಗಳನ್ನು ಸಮಾಜವು ದಿನನಿತ್ಯ ಕಾಣುತ್ತಿದೆ. ಮಕ್ಕಳಿಗೆ ಸೂಕ್ತ ಮಾರ್ಗದರ್ಶನ, ಉತ್ತಮ ಮೌಲ್ಯಗಳನ್ನು ನೀಡುವುದು ಅಗತ್ಯವಾಗಿದೆ. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಉತ್ತಮ ಬುದ್ಧಿವಂತಿಕೆ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿ ಬೆಳೆಸಬೇಕು. ಮಕ್ಕಳ ಭವಿಷ್ಯವನ್ನು ಸುರತ ಗೊಳಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ.ಎಸ್​. ಶಿವನಗೌಡರ, ಶಿಣವು ಮಗುವಿನ ಮೂಲಭೂತ ಹಕ್ಕಾಗಿದೆ. ಯಾವುದೇ ಕಾರಣಕ್ಕೂ ಮಕ್ಕಳು ಶಿಣದಿಂದ ವಂಚಿತ ಆಗಬಾರದು. ಶಿಣದಿಂದ ದೂರವಾದ ಮಕ್ಕಳು ಹಲವಾರು ಸಾಮಾಜಿಕ ಅನಿಷ್ಟಗಳತ್ತ ತಳ್ಳಲ್ಪಡುವ ಅಪಾಯವಿದೆ. ಬಾಲ ಕಾಮಿರ್ಕತೆ, ಮಾದಕ ವಸ್ತುಗಳ ಸಾಗಾಟ, ಅಪರಾಧ ಚಟುವಟಿಕೆಗಳು ಸೇರಿದಂತೆ ವಿವಿಧ ದುಷ್ಪರಿಣಾಮಗಳಿಗೆ ಮಕ್ಕಳು ಬಲಿ ಆಗುವ ಸಾಧ್ಯತೆ ಹೆಚ್ಚಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿಶ್ವ ಬಾಲ ಕಾಮಿರ್ಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾಲೇಜು ಮತ್ತು ಪ್ರೌಢಶಾಲೆ ವಿದ್ಯಾಥಿರ್ಗಳಿಗೆ ಆಯೋಜಿಸಿದ್ದ ಚಿತ್ರಕಲೆ, ಭಾಷಣ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಿ. ಆರ್​. ಮುಂಡರಗಿ, ಡಾ. ನಂದಾ ಹಣಬರಹಟ್ಟಿ, ರಾಧಾ ಮಣ್ಣೂರ, ಆರ್​. ಎಸ್​. ಬುರಡಿ, ಜಯಶ್ರೀ ಆರ್​, ವಸಂತ ಮಡ್ಲೂರ, ಆರ್​.ಜಿ.ಕಲ್ಲೂರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net