ಅನುಷ್ಠಾನಾಧಿಕಾರಿಗಳಿಗೆ ಡಿಸಿ ಎಚ್ಚರಿಕೆ

ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ನಿತೀಶ್ ಕೆ., ಅಧ್ಯಕ್ಷತೆಯಲ್ಲಿ  ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ 2025-26ನೇ ಸಾಲಿನ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಚೌವ್ಹಾಣ್, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ.ಹೆಚ್., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ , ಪಶು ಸಂಗೋಪನೆ ಇಲಾಖೆಯ ಆಡಳಿತಾಧಿಕಾರಿ ಬಿ.ವೈ.ವಾಲ್ಮೀಕಿ, ಡಿಡಿಪಿಐ ಕೆ.ಡಿ.ಬಡಿಗೇರ ಇದ್ದರು.
ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ನಿತೀಶ್ ಕೆ., ಅಧ್ಯಕ್ಷತೆಯಲ್ಲಿ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ 2025-26ನೇ ಸಾಲಿನ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಚೌವ್ಹಾಣ್, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ.ಹೆಚ್., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ , ಪಶು ಸಂಗೋಪನೆ ಇಲಾಖೆಯ ಆಡಳಿತಾಧಿಕಾರಿ ಬಿ.ವೈ.ವಾಲ್ಮೀಕಿ, ಡಿಡಿಪಿಐ ಕೆ.ಡಿ.ಬಡಿಗೇರ ಇದ್ದರು.
Published on
ರಾಯಚೂರು ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಕಾರ್ಯಕ್ರಮಗಳಿಗೆ ಹಂಚಿಕೆಯಲ್ಲಿ ಬೇಜವಾಬ್ದಾರಿ ವಹಿಸಿದ ಕಾರಣಕ್ಕೆ ಅನುದಾನವು ಬಳಕೆಯಾಗದೇ ಲ್ಯಾಪ್ಸ್ ಅದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ವಹಿಸುವುದಾಗಿ ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಗುರುವಾರ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ 2025-26ನೇ ಸಾಲಿನ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದವರ ಏಳ್ಗೆಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಅನುದಾನವು ಆಯಾ ಸಮುದಾಯದವರಿಗೆ ನ್ಯಾಯಯುತವಾಗಿ ತಲುಪಬೇಕು. ನಿಗದಿಪಡಿಸಿದ ಗುರಿಯನುಸಾರ ಬಿಡುಗಡೆಯಾದ ಅನುದಾನವು ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ತಲುಪಬೇಕು.
2025-26 ಸಾಲಿನಲ್ಲಿ ಬಿಡುಗಡೆಯಾದ ಅನುದಾನವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಬೇಕು. ಕಾರ್ಯಕ್ರಮ ನೀಡಿ ಅನುದಾನ ಬಿಡುಗಡೆ ಮಾಡಿದಾಗ್ಯೂ ಅನುದಾನ ಬಳಸದೇ ಇರುವುದು ತಪ್ಪಾಗುತ್ತದೆ. ಇಲಾಖಾವಾರು ಪರಿಶೀಲನೆ ವೇಳೆ ಯಾವುದೇ ಇಲಾಖೆಯ ಅಧಿಕಾರಿಗಳು ಅನುದಾನ ಬಳಸದೇ ತಪ್ಪು ಎಸಗಿರುವುದು ಕಂಡು ಬಂದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಅಧಿನಿಯಮದಡಿ ಅಮಾನತು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನದ ಜೊತೆಗೆ ಎಸ್ಸಿಪಿ ಮತ್ತು ಟಿಎಸ್ಪಿ ಕಾರ್ಯಕ್ರಮಗಳ ಭೌತಿಕ ಹಾಗೂ ಆರ್ಥಿಕ ಗುರಿ ಸಾಧನೆಗೆ ಪ್ರಥಮಾದ್ಯತೆ ನೀಡಬೇಕು. ಆಯಾ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಬೇಕು. ಬಿಡುಗಡೆಯಾದ ಅನುದಾನ ಮರಳಿ ಹೋಗದಂತೆ ನೋಡಿಕೊಳ್ಳಬೇಕು. ಬಾಕಿ ಉಳಿಸಿದ ಅನುದಾನಕ್ಕೆ ನಿಯಮಾನುಸಾರ ಬಿಲ್ಲುಗಳನ್ನು ಕಾಲಮಿತಿಯೊಳಗೆ ಸಿದ್ಧಪಡಿಸಿ, ನಿಗದಿಪಡಿಸಿದ ಅವಧಿಯೊಳಗೆ ಖಜಾನೆಗೆ ಸಲ್ಲಿಸಬೇಕು. ಈ ಸಂಬಅಧ ಏನಾದರು ತಾಂತ್ರಿಕ ಕಾರಣಗಳು ಎದುರಾದಲ್ಲಿ ಜಿಲ್ಲಾಡಳಿತ ಅಥವಾ ಜಿಲ್ಲಾ ಪಂಚಾಯತ್ ಸಿಇಓ ಅವರ ಗಮನಕ್ಕೆ ತರಬೇಕು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಪಂ ಸಿಇಓ ಈಶ್ವರ ಕುಮಾರ ಕಾಂದೊ ಮಾತನಾಡಿ, ಜಿಲ್ಲೆಯ ಆಯಾ ಇಲಾಖೆಗಳ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಜಾಗೃತಿ ವಹಿಸಿ ಕಾರ್ಯನಿರ್ವಹಿಸಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಕಾರ್ಯಕ್ರಮಗಳನ್ನು ಹಗುರವಾಗಿ ಪರಿಗಣಿಸಬಾರದು. ಬಿಡುಗಡೆಯಾದ ಅನುದಾನಕ್ಕೆ ಶೇ.100ರಷ್ಟು ಸಾಧನೆ ಮಾಡಲೇಬೇಕು. ಎಲ್ಲ ಅನುದಾನವನ್ನು ಬಳಸಬೇಕು. ಕೆಲವು ಇಲಾಖೆಗಳ ಅಧಿಕಾರಿಗಳು ಅನುದಾನ ಬಳಕೆಗೆ ಗಮನ ಹರಿಸುತ್ತಿಲ್ಲ. ಅನುದಾನ ಬಳಕೆ ಮಾಡದೇ ನಿರ್ಲಕ್ಷ5್ಯ ವಹಿಸಿದಲ್ಲಿ ಹೊಸ ಕಾಯ್ದೆ ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಾಗುತ್ತದೆ ಎಂಬುದರ ಬಗ್ಗೆ ಅರಿವು ಹೊಂದಿ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಚೌವ್ಹಾಣ್, ರಿಮ್ಸ್ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ.ಹೆಚ್., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರವೀಣ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ , ಪಶು ಸಂಗೋಪನೆ ಇಲಾಖೆಯ ಆಡಳಿತಾಧಿಕಾರಿ ಬಿ.ವೈ.ವಾಲ್ಮೀಕಿ, ಡಿಡಿಪಿಐ ಕೆ.ಡಿ.ಬಡಿಗೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜೇಂದ್ರ ಜಲ್ದಾರ , ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ ಸೇರಿದಂತೆ ಅನೇಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net